ಕುಡಿಯುವ ನೀರು ಮುಟ್ಟಿದ್ದಕ್ಕೆ ದಲಿತ ಬಾಲಕನ ಹತ್ಯೆಯನ್ನು ಖಂಡಿಸಿ ರಾಜೀನಾಮೆ ನೀಡಿದ ಶಾಸಕ
ಜೈಪುರ: ಕುಡಿಯುವ ನೀರಿನ ಮಡಕೆ ಮುಟ್ಟಿದ ದಲಿತ ಬಾಲಕನನ್ನು ಅಮಾನವೀಯವಾಗಿ ಥಳಿಸಿ ಹತ್ಯೆ ಮಾಡಲಾಗಿರುವ ಘಟನೆಯನ್ನು ಖಂಡಿಸಿ ಕಾಂಗ್ರೆಸ್ ಶಾಸಕ ಪನಾ ಚಂದ್ ಮೇಘವಾಲ್ ಅವರು ಸೋಮವಾರ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಸೋಮವಾರ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರಿಗೆ ರಾಜೀನಾಮೆ ಸಲ್ಲಿಸಿದ ಪನಾ ಚಂದ್ರ ಮೇಘವಾಲ್, ಸಮುದಾಯಗಳ ಹಕ್ಕುಗಳನ್ನು ರಕ್ಷಿಸಲು ಸಾಧ್ಯವಾಗದೇ ಇರುವಾದ ಶಾಸಕನಾಗಿ ಉಳಿಯುವ ಹಕ್ಕು ನನಗಿಲ್ಲ. ನನ್ನ ಆತ್ಮಸಾಕ್ಷಿಗೆ ಅನುಗುಣವಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ಸಮಾಜಕ್ಕೆ ಸೇವೆ ಸಲ್ಲಿಸುತ್ತೇನೆ ಎಂದು ಅವರು ತಿಳಿಸಿದ್ದಾರೆ.
7ನೇ ಸ್ವಾತಂತ್ರ್ಯ ಸಂಭ್ರಮದ ಸಂದರ್ಭದಲ್ಲೂ ದೇಶದಲ್ಲಿ ಪರಿಶಿಷ್ಟರು ಮತ್ತು ಶೋಷಿತರ ಮೇಲೆ ದೌರ್ಜನ್ಯಗಳು ನಡೆಯುತ್ತಲೇ ಇವೆ. ನನ್ನ ಸಮುದಾಯವನ್ನು ಹಿಂಸಿಸುತ್ತಿರುವ ರೀತಿಯನ್ನು ಪದಗಳಲ್ಲಿ ವ್ಯಕ್ತಪಡಿಸಲು ಸಾಧ್ಯವಿಲ್ಲ ಎಂದಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka