ರಾಜಸ್ಥಾನ: ಕೆಮಿಕಲ್ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ - Mahanayaka
3:07 PM Tuesday 12 - November 2024

ರಾಜಸ್ಥಾನ: ಕೆಮಿಕಲ್ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ

fire
24/12/2021

ಕೋಟಾ: ರಾಜಸ್ಥಾನದ ಕೋಟಾ ನಗರದ ಇಂದ್ರಪ್ರಸ್ಥ ಪ್ರದೇಶದಲ್ಲಿರುವ ಕೆಮಿಕಲ್ ಫ್ಯಾಕ್ಟರಿಯಲ್ಲಿ ಇಂದು ಬೆಳಗ್ಗೆ ಅಗ್ನಿ ಅವಘಡ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇಂದು ಬೆಳಗ್ಗೆ 7 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದ್ದು, 16 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಆಗಮಿಸಿವೆ ಎಂದು ವಿಜ್ಞಾನ ನಗರ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಅಬ್ದುಲ್ ರಶೀದ್ ಅವರು ತಿಳಿಸಿದ್ದಾರೆ.

ಅಗ್ನಿ ಅವಘಡದ ವೇಳೆ ಫ್ಯಾಕ್ಟರಿಯ ಆವರಣದಲ್ಲಿ ಯಾರೂ ಇಲ್ಲದ ಕಾರಣ ಯಾವುದೇ ಪ್ರಾಣ ಹಾನಿ ಅಥವಾ ಗಾಯಗೊಂಡ ಬಗ್ಗೆ ವರದಿಯಾಗಿಲ್ಲ ಎಂದು ಅವರು ಹೇಳಿದ್ದಾರೆ.

ಕೋಟಾ ಪುರಸಭೆಯ ಸಹಾಯಕ ಅಗ್ನಿಶಾಮಕ ಅಧಿಕಾರಿ ದೇವೆಂದರ್ ಗೌತಮ್ ಅವರು ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಈ ಅಗ್ನಿ ಅವಘಡ ಸಂಭವಿಸಿರಬಹುದು ಎಂದು ಹೇಳಿದ್ದಾರೆ. ಅಗ್ನಿಶಾಮಕ ಅಧಿಕಾರಿಗಳು ಬೆಂಕಿಯನ್ನು ನಂದಿಸಿ ಕಾರ್ಖಾನೆಗೆ ದಾರಿ ಮಾಡಿಕೊಡಲು ಪ್ರಯತ್ನಿಸುತ್ತಿದ್ದಾರೆ. ಆದರೆ ಸುಮಾರು ಶೇ. 30 ರಷ್ಟು ಬೆಂಕಿಯನ್ನು ಮಾತ್ರ ನಿಯಂತ್ರಣಕ್ಕೆ ತರಲಾಗಿದೆ ಎಂದು ತಿಳಿಸಿದ್ದಾರೆ.




.ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DbJM9kayC1K4utc3ntXPdh

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಕೆಎಸ್ಸಾರ್ಟಿಸಿ ಖಾಸಗೀಕರಣ ಮಾಡುವ ಪ್ರಸ್ತಾಪವಿಲ್ಲ: ಸಚಿವ ಕೋಟ ಶ್ರೀನಿವಾಸ ಪೂಜಾರಿ

ಮೀನುಗಾರನನ್ನು ತಲೆಕೆಳಗಾಗಿ ನೇತು ಹಾಕಿ ಹಲ್ಲೆ: ಆರು ಮಂದಿ ಆರೋಪಿಗಳು ಅರೆಸ್ಟ್

ಸ್ವಾಭಿಮಾನಕ್ಕೆ ಧಕ್ಕೆಯಾದ ಕಾರಣ ಬೌದ್ಧ ಧರ್ಮಕ್ಕೆ ಸೇರ್ಪಡೆ: ಶಾಸಕ ಎನ್.ಮಹೇಶ್

ಮಗುವಿನ ಹುಟ್ಟುಹಬ್ಬ ಮುಗಿಯುವ ಮೊದಲೇ ಮಸಣ ಸೇರಿದ ತಾಯಿ!

ರಾಜ್ಯದಲ್ಲಿ ಶೀಘ್ರದಲ್ಲೇ ಉದ್ಯೋಗ ನೀತಿ ಜಾರಿ: ಸಿಎಂ ಬಸವರಾಜ ಬೊಮ್ಮಾಯಿ

 

 

ಇತ್ತೀಚಿನ ಸುದ್ದಿ