ಲಾಂಗ್ ಹಿಡಿದು ರೀಲ್ಸ್: ಜೈಲಿನಿಂದ ಬಿಡುಗಡೆಯಾದ ರಜತ್ ಕಿಶನ್–ವಿನಯ್ ಗೌಡ

ಬೆಂಗಳೂರು: ಲಾಂಗ್ ಹಿಡಿದು ರೀಲ್ಸ್ ಮಾಡಿದ ಆರೋಪದಡಿ ಬಂಧಿತರಾಗಿದ್ದ ಕನ್ನಡ ಬಿಗ್ಬಾಸ್ ರಿಯಾಲಿಟಿ ಶೋನ ಮಾಜಿ ಸ್ಪರ್ಧಿಗಳಾದ ರಜತ್ ಕಿಶನ್ ಮತ್ತು ವಿನಯ್ ಗೌಡಗೆ ನಗರದ 24ನೇ ಎಸಿಎಂಎಂ ನ್ಯಾಯಾಲಯ ಷರತ್ತುಬದ್ಧ ಜಾಮೀನು ನೀಡಿದೆ.
ಇಂದು ಬೆಳಗ್ಗೆ ಪರಪ್ಪನ ಅಗ್ರಹಾರ ಜೈಲಿನಿಂದ ರಜತ್ ಹಾಗೂ ವಿನಯ್ ಬಿಡುಗಡೆ ಆಗಿದ್ದಾರೆ. ಶುಕ್ರವಾರ (ಮಾ.28) ಮಧ್ಯಾಹ್ನವೇ ರಜತ್ ಹಾಗೂ ವಿನಯ್ ಗೌಡಗೆ ಜಾಮೀನು ನೀಡಲಾಗಿತ್ತು. ಆದರೆ, ನ್ಯಾಯಾಲಯದಿಂದ ಆದೇಶ ಪ್ರತಿ ತಡವಾಗಿ ಜೈಲು ಅಧಿಕಾರಿಗಳ ಕೈ ಸೇರಿದ್ದರಿಂದ ಬಿಡುಗಡೆ ವಿಳಂಬವಾಗಿತ್ತು.
ಆರೋಪಿಗಳ ಪರ ವಕೀಲ ಪ್ರಕಾಶ್, ಪ್ರಕರಣ ಸಂಬಂಧ ತಮ್ಮ ಕಕ್ಷಿದಾರರನ್ನು ಮೂರು ದಿನಗಳ ಕಾಲ ಪೊಲೀಸ್ ವಶಕ್ಕೆ ಪಡೆಯಲಾಗಿದೆ. ಆರೋಪಿತರಿಗೆ ಯಾವುದೇ ಅಪರಾಧ ಹಿನ್ನೆಲೆಯಿಲ್ಲ. ಅಲ್ಲದೆ, ಪೊಲೀಸ್ ತನಿಖೆಗೆ ಸಹಕರಿಸಿದ್ದಾರೆ. ಹೀಗಾಗಿ, ಜಾಮೀನು ಅರ್ಜಿ ಪುರಸ್ಕರಿಸಬೇಕು’ ಎಂದು ಕೋರಿದರು. ವಾದ, ಪ್ರತಿವಾದ ಆಲಿಸಿದ ನ್ಯಾಯಾಧೀಶರು, ರಜತ್ ಮತ್ತು ವಿನಯ್ ಗೌಡಗೆ ಷರತ್ತುಬದ್ಧ ಜಾಮೀನು ನೀಡಿ ಆದೇಶ ಹೊರಡಿಸಿದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/HEkqDgrW2BlJLad5kZ1DX7