ಶಾಲೆಗೆ ರಜೆ ನೀಡುವ ವಿಚಾರದಲ್ಲಿ ಶಿಕ್ಷಣ ಇಲಾಖೆ ಮಹತ್ವದ ಸೂಚನೆ
ಬೆಂಗಳೂರು: ರಾಜ್ಯಾದ್ಯಂತ ವ್ಯಾಪಕವಾಗಿ ಮಳೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಮಳೆ ಹೆಚ್ಚಾಗಿರುವ ಶಾಲೆಗಳಿಗೆ ಕಳೆದ ಹಲವು ದಿನಗಳಿಂದ ರಜೆ ಘೋಷಿಸಲಾಗಿದ್ದು, ಮಂಗಳೂರಿನಲ್ಲಿ ಇಂದು ಶಾಲೆಗಳು ತೆರೆದಿವೆ. ಈ ನಡುವೆ ಶಾಲೆಗಳಿಗೆ ರಜೆ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಶಿಕ್ಷಣ ಇಲಾಖೆ ಮಹತ್ವದ ಸೂಚನೆ ನೀಡಿದೆ.
ಮಕ್ಕಳು ಸುಗಮವಾಗಿ ಶಾಲೆಗೆ ಬಂದು ಹೋಗಲು ಸಾಧ್ಯವಾಗದ ಪ್ರದೇಶಗಳ ಶಾಲೆಗಳಿಗೆ ಆಯಾ ಶಾಲಾ ಮುಖ್ಯೋಪಾಧ್ಯಾಯರೇ ಅಧಿಕಾರಿಗಳ ಸಹಮತ ಪಡೆದು ರಜೆ ಘೋಷಿಸಬಹುದು ಎಂದು ಸುತ್ತೋಲೆ ಹೊರಡಿಸಲಾಗಿದೆ.
ಇದಲ್ಲದೇ ಶಿಥಿಲಾವಸ್ಥೆಯಲ್ಲಿರುವ ಕಟ್ಟಡಗಳಿಂದ ಮಕ್ಕಳನ್ನು ದೂರ ಇರಿಸಬೇಕು ಎಂದು ತಿಳಿಸಲಾಗಿದ್ದು, ಅಂತಹ ಕಟ್ಟಡಗಳು ಕುಸಿದು ಬೀಳುವ ಸಾಧ್ಯತೆ ಇರುವುದರಿಂದ ಅಲ್ಲಿ ತರಗತಿಗಳನ್ನು ನಡೆಸುವುದಾಗಲಿ ಅಥವಾ ಶೌಚಾಲಯ ಬಳಸುವುದನ್ನು ನಿಲ್ಲಿಸಬೇಕು ಎಂದು ಸೂಚಿಸಲಾಗಿದೆ.
ರಾಜ್ಯಾದ್ಯಂತ ಕಳೆದ ಹಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದೆ. ದಕ್ಷಿಣ ಕನ್ನಡ ಹಾಗೂ ಕರಾವಳಿಯಲ್ಲಿ ಭಾರೀ ಮಳೆಯಾಗಿದ್ದು, ಈ ಹಿನ್ನೆಲೆಯಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿತ್ತು. ಇಂದು ಮಳೆ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಶಾಲೆಗೆ ತೆರಳಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka