ರಾಜೀವ್ ಗಾಂಧಿ 77ನೇ ಜನ್ಮ ದಿನಾಚರಣೆ: ವೀರಭೂಮಿಯಲ್ಲಿ ನಮನ ಸಲ್ಲಿಸಿ, ಕಾಲ ಕಳೆದ ರಾಹುಲ್ ಗಾಂಧಿ
ನವದೆಹಲಿ: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ 77ನೇ ಜನ್ಮ ದಿನಾಚರಣೆ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡ ರಾಹುಲ್‍ಗಾಂಧಿ ಅವರು ತಮ್ಮ ತಂದೆಗೆ ನಮನ ಸಲ್ಲಿಸಿದ್ದಾರೆ. ವೀರಭೂಮಿಯಲ್ಲಿರುವ ರಾಜೀವ್ ಗಾಂಧಿ ಅವರ ಸ್ಮಾರಕಕ್ಕೆ ಆಗಮಿಸಿದ ರಾಹುಲ್ ಗಾಂಧಿ ಅವರು ನಮನ ಸಲ್ಲಿಸಿ ಕೆಲ ಕಾಲ ಅಲ್ಲೇ ಕಾಲ ಕಳೆದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಪವನ್ ಕುಮಾರ್ ಬನ್ಸಾಲ್, ಕೆ.ಸಿ.ವೇಣುಗೋಪಾಲ್, ಬಿ.ವಿ.ಶ್ರೀನಿವಾಸ್ ಮೊದಲಾದ ಗಣ್ಯರು ಅವರ ಜತೆಗಿದ್ದರು. ರಾಜೀವ್ ಗಾಂಧಿ ಅವರ ಹುಟ್ಟು ಹಬ್ಬದ ಸಂದರ್ಭದಲ್ಲಿ ‘ಜಾತ್ಯತೀತ ಭಾರತವೊಂದೇ ಬದುಕುಳಿಯುವ ಭಾರತ’ ಎಂದು ನಂತರ ರಾಹುಲ್ ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿದ್ದಾರೆ.
ದೇಶದ ಅತ್ಯಂತ ಕಿರಿಯ ಪ್ರಧಾನ ಮಂತ್ರಿ, ದೇಶಭಕ್ತ, 21 ನೇ ಶತಮಾನದ ವಿನ್ಯಾಸಗಾರ, ಭಾರತರತ್ನ ದಿ.ರಾಜೀವ್‍ಗಾಂಧಿ ಅವರಿಗೆ ಭಕ್ತಿಪೂರ್ವಕ ನಮನಗಳು ಎಂದು ಕಾಂಗ್ರೆಸ್ ಪಕ್ಷ ಟ್ವೀಟ್ ಮಾಡಿದೆ.
ಇನ್ನಷ್ಟು ಸುದ್ದಿಗಳು…
ಇಬ್ಬರು ಅಂಗಾಂಗ ದಾನಿಗಳ ದಾನದಿಂದ 14 ಮಂದಿಯ ಪ್ರಾಣ ಉಳಿಯಿತು
ಪೆಟ್ರೋಲ್ ಬೆಲೆ ಏರಿಕೆ ಬಗ್ಗೆ ಪ್ರಶ್ನಿಸಿದ್ದಕ್ಕೆ ಅಫ್ಘಾನಿಸ್ತಾನಕ್ಕೆ ಹೋಗಿ ಎಂದ ಬಿಜೆಪಿ ನಾಯಕ!
ಬಿಜೆಪಿಯ ಜನಾಶೀರ್ವಾದ ಕಾರ್ಯಕ್ರಮದಲ್ಲಿ ಕಳ್ಳರ ಕಾಟ | ಕಾರ್ಯಕರ್ತರ ಜೇಬಿಗೆ ಕತ್ತರಿ
ಲೈಂಗಿಕ ಬಯಕೆ ಈಡೇರಿಸಲು ಹೋಗುತ್ತಿದ್ದ ಪುರುಷರಿಗೆ ಬಿಗ್ ಶಾಕ್ ನೀಡುತ್ತಿದ್ದ ಮಹಿಳೆಯರು !