ಒಮಿಕ್ರಾನ್ ಭೀತಿ: ಡಿಸೆಂಬರ್ 28ರಿಂದ 10 ದಿನಗಳ ಕಾಲ ರಾಜ್ಯದಲ್ಲಿ ನೈಟ್ ಕರ್ಫ್ಯೂ!
ಬೆಂಗಳೂರು: ಹೊಸ ವರ್ಷಾಚರಣೆಗೆ ಕೇವಲ ಒಂದು ವಾರ ಇರುವಾಗಲೇ ಒಮಿಕ್ರಾನ್ ಭೀತಿ ಸೃಷ್ಟಿಯಾಗಿದ್ದು, ಈ ಹಿನ್ನೆಲೆಯಲ್ಲಿ ಡಿಸೆಂಬರ್ 28ರಿಂದ 10 ದಿನಗಳ ಕಾಲ ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ನೈಟ್ ಕರ್ಫ್ಯೂ ಜಾರಿಯಾಗಲಿದೆ.
ಇಂದು ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಮಹತ್ವದ ಸಭೆ ನಡೆದಿದ್ದು, ಈ ಸಭೆಯ ಬಳಿಕ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಮಾಧ್ಯಮಗಳ ಜೊತೆಗೆ ಮಾತನಾಡುತ್ತಾ ಈ ವಿಚಾರವನ್ನು ತಿಳಿಸಿದ್ದು, ಡಿ.28ರಿಂದ 10 ದಿನಗಳ ಕಾಲ ರಾತ್ರಿ 10 ಗಂಟೆಯಿಂದ ಬೆಳಗ್ಗೆ 5ರವರೆಗೆ ನೈಟ್ ಕರ್ಫ್ಯೂ ಜಾರಿ ಇರಲಿದೆ ಎಂದು ತಿಳಿಸಿದರು.
ಸಾರ್ವಜನಿಕ ಸ್ಥಳಗಳಲ್ಲಿ ರಾತ್ರಿ ಹೊಸ ವರ್ಷ ಆಚರಿಸುವಂತಿಲ್ಲ. ಸಭೆ ಸಮಾರಂಭಗಳಲ್ಲಿ ಶೇ.50ರಷ್ಟು ಜನರಿಗೆ ಮಾತ್ರ ಅವಕಾಶ ನೀಡಲಾಗಿದೆ. ಅಲ್ಲದೇ ಹಗಲಿನಲ್ಲೂ ಬಾರ್, ಪಬ್, ಕ್ಲಬ್, ರೆಸ್ಟೋರೆಂಟ್‌ಗಳಲ್ಲಿ ಶೇ.50ರಷ್ಟು ಜನರಿಗೆ ಮಾತ್ರ ಮಿತಿಗೊಳಿಸಲಾಗಿದೆ ಅಂತ ತಿಳಿಸಿದ್ದಾರೆ. ಪಬ್, ಬಾರ್, ರೆಸ್ಟೋರೆಂಟ್ ಗಳಲ್ಲಿ 50:50 ನಿಯಮ ಜಾರಿಗೊಳಿಸಿದ ಕರ್ನಾಟಕ ಸರ್ಕಾರ, ಸಿನಿಮಾ ಥಿಯೇಟರ್ ಗಳಿಗೆ ಸದ್ಯ ಈ ನಿಮಯ ಅನ್ವಯವಾಗಲ್ಲ ಅಂತ ತಿಳಿಸಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DbJM9kayC1K4utc3ntXPdh
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಅತಿಥಿ ಉಪನ್ಯಾಸಕರೊಂದಿಗೆ ವಿದ್ಯಾರ್ಥಿಗಳು: ಹೋರಾಟಕ್ಕೆ ಕ್ಯಾಂಪಸ್ ಫ್ರಂಟ್ ತೀರ್ಮಾನ
ಮುಸ್ಲಿಮರನ್ನು, ಕ್ರೈಸ್ತರನ್ನು ಘರ್ ವಾಪಸಿ ಮಾಡದೇ ಬೇರೆ ದಾರಿಯಿಲ್ಲ | ಸಂಸದ ತೇಜಸ್ವಿ ಸೂರ್ಯ
ಕಳೆದ 7 ವರ್ಷಗಳಿಂದ ಮೋದಿ ಸರ್ಕಾರ ‘ಉತ್ತಮ ಆಡಳಿತ’ ನೀಡುತ್ತಿದೆ | ಅಮಿತ್ ಶಾ
ರಾಜಸ್ಥಾನ: ಮಿಗ್-21 ಫೈಟರ್ ಜೆಟ್ ಪತನ; ಪೈಲಟ್ ವಿಂಗ್ ಕಮಾಂಡರ್ ಹುತಾತ್ಮ
ಮೂಡುಬಿದಿರೆ: ಎಸ್ ಕೆಎಫ್ ಕಾರ್ಖಾನೆಯಿಂದ ತೊಂದರೆ: ಗ್ರಾಮಸ್ಥರಿಂದ ಅಹೋರಾತ್ರಿ ಪ್ರತಿಭಟನೆ