ರಾಜ್ಯದಲ್ಲಿ ಆಗಸ್ಟ್ 23ರಿಂದ ಶಾಲಾ ಕಾಲೇಜು ಆರಂಭಕ್ಕೆ ತೀರ್ಮಾನ | ಸಿಎಂ ಹೇಳಿದ್ದೇನು? - Mahanayaka

ರಾಜ್ಯದಲ್ಲಿ ಆಗಸ್ಟ್ 23ರಿಂದ ಶಾಲಾ ಕಾಲೇಜು ಆರಂಭಕ್ಕೆ ತೀರ್ಮಾನ | ಸಿಎಂ ಹೇಳಿದ್ದೇನು?

karnataka school opening
06/08/2021

ಬೆಂಗಳೂರು:  ರಾಜ್ಯದಲ್ಲಿ 9, 10 ಹಾಗೂ  ಪಿಯುಸಿ ತರಗತಿಗಳನ್ನು ಆಗಸ್ಟ್ 23ರಿಂದ ಪ್ರಾರಂಭಿಸಲು ಸಿಎಂ ಬಸವರಾಜ್ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಇಂದು ನಡೆದ ಉನ್ನತ ಮಟ್ಟದ ಸಭೆಯಲ್ಲಿ ತೀರ್ಮಾನಿಸಲಾಗಿದ್ದು, ಹಿರಿಯರು ಹಾಗೂ ತಜ್ಞರೊಂದಿಗಿನ ಸಭೆಯಲ್ಲಿ ಸಿಎಂ ಶಾಲಾ ಆರಂಭದ ಕುರಿತು ಚರ್ಚಿಸಿದರು.

ಆಗಸ್ಟ್ 23 ರಿಂದ 9, 10 ಮತ್ತು ಪಿಯುಸಿ ತರಗತಿಯನ್ನು ಪ್ರಾರಂಭಿಸಲು ಹಾಗೂ ರಾಜ್ಯದ ಕೋವಿಡ್ ಸ್ಥಿತಿಗತಿಯನ್ನು ಆಧರಿಸಿ, ಪ್ರಾಥಮಿಕ ಶಾಲೆ ಮತ್ತು 8ನೇ ತರಗತಿ ಪ್ರಾರಂಭಿಸುವ ಬಗ್ಗೆ ಆಗಸ್ಟ್ ತಿಂಗಳ ಅಂತ್ಯದಲ್ಲಿ ಕ್ರಮ ಕೈಗೊಳ್ಳಲು ತೀರ್ಮಾನಿಸಲಾಯಿತು ಎಂದು ವರದಿಯಾಗಿದೆ.

ವಿದ್ಯಾರ್ಥಿಗಳಿಗೆ ದಿನ ಬಿಟ್ಟು ದಿನ ತರಗತಿ ನಡೆಸಲು ನಿರ್ಧರಿಸಿದ್ದು, ಶಾಲೆ ಕಾಲೇಜುಗಳನ್ನು ಪ್ರಾರಂಭಿಸುವ ಸಂದರ್ಭದಲ್ಲಿ ಅನುಸರಿಸಬೇಕಾದ ಮಾರ್ಗಸೂಚಿಗಳ ಕುರಿತು ಅಧಿಕೃತವಾಗಿ ಅಧಿಸೂಚನೆ ಹೊರಡಿಸಲಾಗುವುದು ಎಂದು ಸಭೆಯ ಬಳಿಕ ಮಾಧ್ಯಮಗಳಿಗೆ ಸಿಎಂ ತಿಳಿಸಿದ್ದಾರೆ.

ರಾಜ್ಯದಲ್ಲಿ ಒಂದೆಡೆ ನೈಟ್ ಕರ್ಫ್ಯೂ ಜಾರಿಗೊಳಿಸಲಾಗಿದೆ, ಲಾಕ್ ಡೌನ್ ಸಾಧ್ಯತೆ ಇದೆ ಎಂದು ಕೂಡ ಹೇಳಲಾಗುತ್ತಿದೆ. ಇನ್ನೊಂದೆಡೆ ಶಾಲೆಗಳನ್ನು ತೆರೆಯುವ ಬಗ್ಗೆ ಚರ್ಚೆಯಾಗುತ್ತಿದೆ. ಸದ್ಯ ಇದು ಸಾರ್ವಜನಿಕರಲ್ಲಿ ಗೊಂದಲವನ್ನು ಸೃಷ್ಟಿಸಿದೆ.

ಇನ್ನಷ್ಟು ಸುದ್ದಿಗಳು…

ರಾಜ್ಯಾದ್ಯಂತ ನೈಟ್ ಕರ್ಫ್ಯೂ ಜಾರಿ | ದ.ಕ.ಸೇರಿದಂತೆ 8 ಗಡಿ ಜಿಲ್ಲೆಗಳಲ್ಲಿ ವಾರಾಂತ್ಯ ಕರ್ಫ್ಯೂ

ಎಲ್ಲ ವಿದ್ಯಾರ್ಥಿಗಳು ಪಾಸ್, ಶಿಕ್ಷಣ ಸಚಿವರು ಫೇಲ್! | ರಿ ಎಕ್ಸಾಮ್ ಬರೀತಾರಾ ಸುರೇಶ್ ಕುಮಾರ್?

ತಾಯಿಯೇ ಮಗನಿಗೆ ಮೋಸ ಮಾಡಿದಾಗ ಮಗ ಅನಾಥನಾಗಿದ್ದ | ಬಿಜೆಪಿ ಸೇರ್ಪಡೆಗೆ ಎನ್.ಮಹೇಶ್ ಪ್ರತಿಕ್ರಿಯೆ

403 ಕ್ಷೇತ್ರಗಳಲ್ಲಿಯೂ ASP ಸ್ಪರ್ಧೆ | ಮಾಯಾವತಿಗೆ ಅಸುರಕ್ಷಿತ ಭಾವನೆ ಇದೆ- ಚಂದ್ರಶೇಖರ್ ಆಜಾದ್

ಬಿಗ್ ನ್ಯೂಸ್:  ರಾಜಕೀಯ ನಿವೃತ್ತಿ ಘೋಷಿಸಿದ ಸಂಸದ ಶ್ರೀನಿವಾಸ್ ಪ್ರಸಾದ್

ಇತ್ತೀಚಿನ ಸುದ್ದಿ