ಅಗತ್ಯ ಬಿದ್ದರೆ ನೈಟ್ ಕರ್ಫ್ಯೂ: ರಾಜ್ಯಗಳಿಗೆ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಸರ್ಕಾರ ಸೂಚನೆ
ನವದೆಹಲಿ: ಅಗತ್ಯ ಬಿದ್ದರೆ ರಾತ್ರಿ ಕರ್ಫ್ಯೂ ಜಾರಿ ಮಾಡಿ, ಕೊರೊನಾ ವಾರ್ ರೂಮ್ ಗಳನ್ನು ಚುರುಕುಗೊಳಿಸಿ, ಆಸ್ಪತ್ರೆಗಳಲ್ಲಿ ಐಸಿಯು ಬೆಡ್‌ಗಳನ್ನು ಸಿದ್ಧಗೊಳಿಸಿ ಎಂದು ಕೇಂದ್ರ ಸರ್ಕಾರವು ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚನೆ ನೀಡಿದೆ.
ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ರಾಜ್ಯಗಳ ಮುಖ್ಯ ಕಾರ್ಯ ದರ್ಶಿಗಳಿಗೆ ಬರೆದಿರುವ ಪತ್ರದಲ್ಲಿ ಈ ಅಂಶ ಉಲ್ಲೇಖೀಸಲಾಗಿದೆ. ಜಿಲ್ಲಾ ಮಟ್ಟ, ಸ್ಥಳೀಯ ಮಟ್ಟದಲ್ಲಿ ಕೂಡ ಕಂಟೈನ್‌ಮೆಂಟ್ ವಲಯಗಳ ಬಗ್ಗೆ ಎಚ್ಚರಿಕೆಯಿಂದ ಇರಬೇಕು ಎಂದು ಅವರು ಸೂಚಿಸಿದ್ದಾರೆ. ಡೆಲ್ಟಾಗೆ ಹೋಲಿಕೆ ಮಾಡಿದರೆ ಒಮಿಕ್ರಾನ್ ಮೂರು ಪಟ್ಟು ಹೆಚ್ಚು ಹರಡುತ್ತದೆ ಎಂದಿದ್ದಾರೆ.
ದೇಶದಲ್ಲಿ ಸದ್ಯಕ್ಕೆ ಮಕ್ಕಳಿಗೆ ಲಸಿಕೆ ಹಾಕುವ ಅಗತ್ಯವಿಲ್ಲ. ಅಂಥ ಪರಿಸ್ಥಿತಿಯೂ ಉಂಟಾಗಿಲ್ಲವೆಂದು ರಾಷ್ಟ್ರೀಯ ತಾಂತ್ರಿಕ ಸಮಿತಿ ಕೇಂದ್ರಕ್ಕೆ ಶಿಫಾರಸು ಮಾಡಿದೆ. ದೇಶದಲ್ಲಿ ಒಟ್ಟು ಒಮಿಕ್ರಾನ್ ಕೇಸುಗಳ ಸಂಖ್ಯೆ 200 ದಾಟಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಟ್ವೀಟ್ ಮಾಡಿದೆ. ಈ ಪೈಕಿ ಮಹಾರಾಷ್ಟ್ರದಲ್ಲಿ 65, ದೆಹಲಿಯಲ್ಲಿ ತಲಾ 54, ಕರ್ನಾಟಕದಲ್ಲಿ 19 ಕೇಸುಗಳು ದೃಢಪಟ್ಟಿವೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಎಂಇಎಸ್: ರಾಜ್ಯದ ಸಂಸದರಿಂದ ಇತ್ತ ಗಂಡಸರೂ ಅಲ್ಲ, ಹೆಂಗಸರೂ ಅಲ್ಲ ರೀತಿ ವರ್ತನೆ; ವಾಟಾಳ್ ನಾಗರಾಜ್
ಡಿ.ಕೆ.ಶಿವಕುಮಾರ್‌ಗೆ ಮತಾಂತರವಾದ ಹೆಣ್ಣುಮಕ್ಕಳ ಕಷ್ಟದ ಅರಿವಿಲ್ಲ: ಸಚಿವ ಈಶ್ವರಪ್ಪ
ಮತಾಂತರ ನಿಷೇಧ ವಿಧೇಯಕ ಚರ್ಚೆ ಹಿನ್ನೆಲೆ: ಸುವರ್ಣಸೌಧಕ್ಕೆ ಮಾಧ್ಯಮಗಳಿಗೆ ನಿರ್ಬಂಧ; ಸ್ಪೀಕರ್ ಕಾಗೇರಿ ಸೂಚನೆ
ಯುವಕನ ಬರ್ಬರ ಹತ್ಯೆ: 10ನೇ ತರಗತಿಯ ಇಬ್ಬರು ವಿದ್ಯಾರ್ಥಿನಿಯರು ಅರೆಸ್ಟ್!