ಬಿಗ್ ಬ್ರೇಕಿಂಗ್ ನ್ಯೂಸ್: ರಾಜ್ಯದಲ್ಲಿ ಅಘೋಷಿತ ಲಾಕ್ ಡೌನ್ ಜಾರಿ | ಅಂಗಡಿ ಮುಂಗಟ್ಟು ಬಂದ್!

lockdown
22/04/2021

ಬೆಂಗಳೂರು: ರಾಜ್ಯದಲ್ಲಿ ನೈಟ್ ಕರ್ಫ್ಯೂ ಜಾರಿಗೊಂಡಿರುವ ಬೆನ್ನಲ್ಲೇ ಇಂದು ಸಂಜೆ ಆಶ್ಚರ್ಯಕರ ಬೆಳವಣಿಗೆಯೊಂದರಲ್ಲಿ ರಾಜ್ಯಾದ್ಯಂತ ವಿವಿಧ ಜಿಲ್ಲೆಗಳಲ್ಲಿ ಅಘೋಷಿತ ಲಾಕ್ ಡೌನ್ ಪರಿಸ್ಥಿತಿ ನಿರ್ಮಾಣವಾಗಿದೆ.

ಬೆಂಗಳೂರು, ಮೈಸೂರು, ಬೆಳಗಾವಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಇಂದು ಮಧ್ಯಾಹ್ನವೇ ಏಕಾಏಕಿ ಪೊಲೀಸರು ಅಂಗಡಿ ಮುಂಗಟ್ಟುಗಳನ್ನು ಮುಚ್ಚಿಸಿದ್ದಾರೆ.  ಬೆಂಗಳೂರು ಸಂಪೂರ್ಣ ಬಂದ್  ರೀತಿಯ ಸ್ಥಿತಿ ನಿರ್ಮಾಣವಾಗಿದೆ.

ಬೆಂಗಳೂರಿನ ಎಸ್ ಪಿ ರೋಡ್, ಮೆಜೆಸ್ಟಿಕ್, ಕೆ.ಆರ್.ಮಾರ್ಕೆಟ್, ಚಿಕ್ಕಪೇಟೆ, ಕಾಟನ್ ಪೇಟೆ, ಕೆ.ಆರ್. ಮಾರ್ಕೆಟ್, ಮಲ್ಲೇಶ್ವರಂ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಅಘೋಷಿತ ಲಾಕ್ ಡೌನ್ ಸ್ಥಿತಿ ನಿರ್ಮಾಣವಾಗಿದೆ.

ಸದ್ಯದ ಮಾಹಿತಿಯ ಪ್ರಕಾರ ಪೊಲೀಸರು ಇಂದು ವಿವಿಧ ನಗರಗಳಲ್ಲಿ ಮಧ್ಯಾಹ್ನದ ವೇಳೆ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿಸಿದ್ದು, ಇದರಿಂದಾಗಿ ಅಘೋಷಿತ ಲಾಕ್ ಡೌನ್ ಸ್ಥಿತಿ ಜಾರಿಯಾಗಿದೆ. ಸಾರ್ವಜನಿಕರು, ವ್ಯಾಪಾರಿಗಳು ಏಕಾಏಕಿ ಸರ್ಕಾರ ಈ ರೀತಿಯ ಕ್ರಮವನ್ನು ಕೈಗೊಂಡಿರುವುದರಿಂದ ಶಾಕ್ ಗೊಳಗಾಗಿದ್ದಾರೆ. ಹೊಟೇಲ್ ಗಳಲ್ಲಿ ಆಹಾರಗಳನ್ನು ತಯಾರಿಸಿಟ್ಟು ಗ್ರಾಹಕರಿಗಾಗಿ ಕಾಯುತ್ತಿದ್ದ ಮಾಲಿಕರು ಕಂಗಾಲಾಗಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿಗಳಿಗಾಗಿ ನಿರೀಕ್ಷಿಸಲಾಗುತ್ತಿದೆ.

ಇತ್ತೀಚಿನ ಸುದ್ದಿ

Exit mobile version