ರಾಜ್ಯದಲ್ಲಿ ಇನ್ನೆರಡು ವರ್ಷ ನಾನೇ ಸಿಎಂ | ವಿರೋಧಿ ಬಣಕ್ಕೆ ಯಡಿಯೂರಪ್ಪ ತಿರುಗೇಟು - Mahanayaka
12:14 PM Tuesday 4 - February 2025

ರಾಜ್ಯದಲ್ಲಿ ಇನ್ನೆರಡು ವರ್ಷ ನಾನೇ ಸಿಎಂ | ವಿರೋಧಿ ಬಣಕ್ಕೆ ಯಡಿಯೂರಪ್ಪ ತಿರುಗೇಟು

yediyurappa
11/06/2021

ಹಾಸನ: ರಾಜ್ಯದಲ್ಲಿ ಇನ್ನೂ ಎರಡು ವರ್ಷ ನಾನೇ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತೇನೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದು, ತಮ್ಮ ವಿರೋಧಿ ಬಣಕ್ಕೆ ತಿರುಗೇಟು ನೀಡಿದ್ದಾರೆ.

ಹಾಸನದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎರಡು ವರ್ಷ ನಾನೇ ಸಿಎಂ ಆಗಿರುತ್ತೇನೆ. ಈ ಬಗ್ಗೆ ಜನರಿಗೆ ಭರವಸೆ ನೀಡುತ್ತಿದ್ದೇನೆ. ನನ್ನ ನೇತೃತ್ವದಲ್ಲಿ ರಾಜ್ಯದಲ್ಲಿ ಉತ್ತಮ ಕೆಲಸಗಳಾಗಿವೆ. ಯಡಿಯೂರಪ್ಪನವರೇ ಸಿಎಂ ಆಗಿ ಪೂರ್ಣಾವಧಿ ಮುಗಿಸಬೇಕು ಎಂದು ಅರುಣ್ ಸಿಂಗ್ ಹೇಳಿದ್ದಾರೆ. ಹೀಗಾಗಿ ನನ್ನ ಜವಾಬ್ದಾರಿ ಇನ್ನೂ ಹೆಚ್ಚಾಗಿದೆ ಎಂದು ಅವರು ಹೇಳಿದರು.

ಪ್ರಧಾನಿ ಮೋದಿ, ಅಮಿತ್ ಶಾ ಅವರಿಗೂ ನನ್ನ ಮೇಲೆ ವಿಶ್ವಾಸವಿದೆ. ಈ ನಿಟ್ಟಿನಲ್ಲಿ ನಾನು ರಾಜ್ಯದಲ್ಲಿ ಇನ್ನೂ ಹೆಚ್ಚಿನ ಜನಪರ ಕೆಲಸಗಳನ್ನು ಮಾಡಬೇಕು. ಅರುಣ್ ಸಿಂಗ್ ರಾಜ್ಯ ಉಸ್ತುವಾರಿಯಾಗಿರುವುದರಿಂದ ಜೂನ್ 16ಕ್ಕೆ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ನಾಯಕತ್ವ ಬದಲಾವಣೆ ವಿಚಾರವಾಗಿ ಯಾವುದೇ ಗೊಂದಲಗಳೂ ಇಲ್ಲ ಎಂದು ಸಿಎಂ ಸ್ಪಷ್ಟಪಡಿಸಿದ್ದಾರೆ.

ಇತ್ತೀಚಿನ ಸುದ್ದಿ