ರಾಜ್ಯ ಸರ್ಕಾರಕ್ಕೆ ನಾಚಿಕೆಗೇಡು: ದೇವಸ್ಥಾನ ಪ್ರವೇಶಿಸಿದ ದಲಿತ ವ್ಯಕ್ತಿಗೆ ದಂಡ | ಮತ್ತೊಂದು ಅಸ್ಪೃಶ್ಯತಾ ಆಚರಣೆ ಪ್ರಕರಣ - Mahanayaka

ರಾಜ್ಯ ಸರ್ಕಾರಕ್ಕೆ ನಾಚಿಕೆಗೇಡು: ದೇವಸ್ಥಾನ ಪ್ರವೇಶಿಸಿದ ದಲಿತ ವ್ಯಕ್ತಿಗೆ ದಂಡ | ಮತ್ತೊಂದು ಅಸ್ಪೃಶ್ಯತಾ ಆಚರಣೆ ಪ್ರಕರಣ

untouchability in karnartaka
26/09/2021

ಕಾರಟಗಿ: ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಮಿಯಾಪುರದಲ್ಲಿ ದಲಿತ ಮಗು ದೇವಸ್ಥಾನ ಪ್ರವೇಶಿಸಿದ್ದಕ್ಕೆ ದಂಡ ಹಾಕಿದ ಪ್ರಕರಣ ಮಾಸುವ ಮುನ್ನವೇ ಜಿಲ್ಲೆಯಲ್ಲಿ ಮತ್ತೊಂದು ಅಸ್ಪೃಶ್ಯತಾ ಆಚರಣೆ ಪ್ರಕರಣ ಬೆಳಕಿಗೆ ಬಂದಿದ್ದು, ಕಾರಟಗಿ ತಾಲೂಕಿನ ನಾಗನಕಲ್‌ ಗ್ರಾಮದಲ್ಲಿ ಅಸ್ಪೃಶ್ಯತಾ ಆಚರಣೆ ನಡೆದಿರುವುದು ವರದಿಯಾಗಿದೆ.

ದೆ.16ರಂದು ತಾಲೂಕಿನ ನಾಗನಕಲ್ಲ ಗ್ರಾಮದ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಸಿಂಧೋಳಿ ಸಮಾಜದ ವ್ಯಕ್ತಿ ಮಾರೆಪ್ಪ ಎಂಬವರು ದೇವಸ್ಥಾನಕ್ಕೆ ಪ್ರವೇಶಿಸಿದ್ದು, ಈ ವಿಚಾರಕ್ಕೆ ಸಂಬಂಧಿಸಿದಂತೆ  ದೇವಸ್ಥಾನದ ಅರ್ಚಕ ಹಾಗೂ ಗ್ರಾಮದ 7 ಮಂದಿ ಜನ ಮುಖಂಡರು ಮಾರೆಪ್ಪ ದೇವಸ್ಥಾನಕ್ಕೆ ಪ್ರವೇಶಿಸಿದ್ದರಿಂದ ದೇವಸ್ಥಾನ ಮೈಲಿಗೆಯಾಗಿದೆ ಎಂದು ಹೇಳಿದ್ದು, ಆತನ ತಂದೆ ಕರೆಮಾರೆಪ್ಪ ಸಿಂಧೋಳಿ ಅವರನ್ನು ಕರೆಸಿ ಪಂಚಾಯತಿ ನಡೆಸಿ ದಂಡ ಹಾಕಿದ್ದಾರೆ ಎಂದು ಹೇಳಲಾಗಿದೆ.

ಈ ವಿಚಾರ ಗ್ರಾಮದಾದ್ಯಂತ ಹರಡುತ್ತಿದ್ದಂತೆಯೇ ಅಧಿಕಾರಿಗಳು ಈ ಪ್ರಕರಣವನ್ನು ಮುಚ್ಚಿ ಹಾಕಲು ಪ್ರಯತ್ನಿಸಿದ್ದಾರೆನ್ನಲಾಗಿದೆ. ಆದರೆ ಮಾಧ್ಯಮಗಳಲ್ಲಿ ವರದಿಗಳು ಬಂದ ಹಿನ್ನೆಲೆಯಲ್ಲಿ ಕಾರಟಗಿ ಠಾಣೆ ಪೊಲೀಸರು ದೇವಸ್ಥಾನದ ಅರ್ಚಕ ಸೇರಿ ಎಂಟು ಜನರ ವಿರುದ್ಧ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ.

ಬಸವರಾಜ ಶಂಕ್ರಪ್ಪ ಬಡಿಗೇರ್‌, ರೇವಣಯ್ಯಸ್ವಾಮಿ ಶೇಖರಯ್ಯಸ್ವಾಮಿ ಗಾಲಿಮಠ, ಶೇಖರಪ್ಪ ಬಸಣ್ಣ ರ್ಯಾವಣಕಿ, ಬಸವರಾಜ ಹನುಮಂತಪ್ಪ ತಳವಾರ, ಕಾಡಪ್ಪ ನಾಯಕ್‌, ದುರುಗೇಶ ಅಂಬಣ್ಣ ಸಂಕನಾಳ, ಶರಣಪ್ಪ ವೀರಭದ್ರಪ್ಪ ಗುಂಜಳ್ಳಿ, ಪ್ರಶಾಂತ ರಾಯಪ್ಪ ಅಮ್ಮಣ್ಣನವರ್‌ ಎಂಬ ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ವರದಿಯಾಗಿದೆ.




ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/KPRE32QAEFL3ZvRW2wbYvj

ಇನ್ನಷ್ಟು ಸುದ್ದಿಗಳು…

ಅಕ್ಷರಸ್ಥರೇ ಇವತ್ತು ಬುದ್ಧ, ಬಸವ, ಅಂಬೇಡ್ಕರ್ ಅವರಿಗೆ ಮೋಸ ಮಾಡುತ್ತಿದ್ದಾರೆ | ಡಾ.ಎಚ್.ಟಿ. ಪೋತೆ

ಗೋಡೆ ಮೈಮೇಲೆ ಕುಸಿದು ಬಿದ್ದರೂ ತನ್ನ ಮಗುವಿನ ಮೈಗೆ ಸಣ್ಣ ಗೆರೆಯೂ ಬೀಳದಂತೆ ಕಾಪಾಡಿದ ತಾಯಿ | ವೈರಲ್ ವಿಡಿಯೋ

ಅಮಾನವೀಯ ಘಟನೆ: ಪತ್ನಿಗೆ ನಿದ್ರೆ ಮಾತ್ರೆ ನೀಡಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಪತಿ

ಭಾರತ ಬಂದ್: ಬೆಂಗಳೂರಿನಲ್ಲಿ ಹೈಅಲಾರ್ಟ್ | ಬಂದ್ ತೀವ್ರ ಸ್ವರೂಪದಲ್ಲಿರುವ ಸಾಧ್ಯತೆ!

ಸೊಂಟಕ್ಕೆ ವೇಲ್ ಕಟ್ಟಿಕೊಂಡು ಬೆಟ್ಟದಿಂದ ಹಾರಿ ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು

ನಿದ್ದೆಯಿಂದ ಎಚ್ಚರವಾದ ವೇಳೆ ಆತ ಅತ್ಯಾಚಾರ ನಡೆಸ್ತಿದ್ದ | ಅತ್ಯಾಚಾರಕ್ಕೂ ಮುನ್ನ ಸಂತ್ರಸ್ತೆಯ ವಿಶ್ವಾಸಗಳಿಸಿದ್ದ ಕ್ಯಾಬ್ ಡ್ರೈವರ್!

ಪೆಟ್ರೋಲ್, ಡೀಸೆಲ್ ಗೆ ನೀರು ಬೆರಕೆ | ಪೆಟ್ರೋಲ್ ಬಂಕ್ ಮಾಲಿಕನ ವಿರುದ್ಧ ಗ್ರಾಹಕರಿಂದ ತೀವ್ರ ಆಕ್ರೋಶ

ಇತ್ತೀಚಿನ ಸುದ್ದಿ