ರಾಜ್ಯದಲ್ಲಿ ಮತ್ತೊಂದು ಅತ್ಯಾಚಾರ ಪ್ರಕರಣ: ತರಕಾರಿ ತರಲು ಹೋದ ಬಾಲಕಿಯ ಮೇಲೆ ಅತ್ಯಾಚಾರ - Mahanayaka
10:22 AM Wednesday 5 - February 2025

ರಾಜ್ಯದಲ್ಲಿ ಮತ್ತೊಂದು ಅತ್ಯಾಚಾರ ಪ್ರಕರಣ: ತರಕಾರಿ ತರಲು ಹೋದ ಬಾಲಕಿಯ ಮೇಲೆ ಅತ್ಯಾಚಾರ

hubballi case
24/09/2021

ಹುಬ್ಬಳ್ಳಿ: ರಾಜ್ಯದಲ್ಲಿ ಮತ್ತೊಂದು ಅತ್ಯಾಚಾರ ಪ್ರಕರಣ ದಾಖಲಾಗಿದ್ದು, ತರಕಾರಿ ತರಲೆಂದು ಹೋಗಿದ್ದ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಎಸಗಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.

ಇಬ್ಬರು ಆರೋಪಿಗಳು ಈ ಕೃತ್ಯ ಎಸಗಿದ್ದಾರೆ ಎಂದು ತಿಳಿದು ಬಂದಿದ್ದು, ಘಟನೆಗೆ ಸಂಬಂಧಿಸಿದಂತೆ ಆರೋಪಿಗಳ ವಿರುದ್ಧ ಇಲ್ಲಿನ ಗೋಕುಲ ರಸ್ತೆ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಗಳಿಗಾಗಿ ಶೋಧ ನಡೆಸುತ್ತಿದ್ದಾರೆ.

ತರಕಾರಿ ತರಲೆಂದು ಬಾಲಕಿ ಬಂದಿದ್ದು ಈ ವೇಳೆ ಇಬ್ಬರು ಯುವಕರು ಆಕೆಯನ್ನು ಪುಸಲಾಯಿಸಿ ಹುಬ್ಬಳ್ಳಿಯ ಹಲವೆಡೆ ಸುತ್ತಾಡಿಸಿದ್ದಾರೆ. ಬಳಿಕ ಕಾಲೇಜೊಂದರ ಸಮೀಪ ಕರೆದೊಯ್ದು ಅತ್ಯಾಚಾರ ನಡೆಸಿ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ ಎಂದು ವರದಿಯಾಗಿದೆ.

ರಾಜ್ಯ ಮಾತ್ರವಲ್ಲದೇ ದೇಶಾದ್ಯಂತ ವ್ಯಾಪಕ ಅತ್ಯಾಚಾರ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇದರಿಂದಾಗಿ ಹೆಣ್ಣು ಹೆತ್ತ ಪೋಷಕರು ಆತಂಕ ವ್ಯಕ್ತಪಡಿಸುತ್ತಿದ್ದಾರೆ. ಅತ್ಯಾಚಾರಿಗಳನ್ನು ಮಟ್ಟ ಹಾಕಲು ಸರ್ಕಾರ ಇನ್ನಷ್ಟು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎನ್ನುವ ಒತ್ತಾಯಗಳು ಕೇಳಿ ಬಂದಿವೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/KPRE32QAEFL3ZvRW2wbYvj

ಇನ್ನಷ್ಟು ಸುದ್ದಿಗಳು…

ಕೃಷ್ಣ ಬೆಣ್ಣೆ ಕದ್ದರೆ ತುಂಟಾಟ, ಈ ಬಾಲಕ ಹಸಿವಿನಿಂದ ತಿಂಡಿ ಕದ್ದರೆ ಅಪರಾಧವೇ? | ನ್ಯಾಯಾಧೀಶರ ಪ್ರಶ್ನೆ

ಅಸ್ಪೃಶ್ಯತೆ ಅನಿಷ್ಟ ಪದ್ಧತಿ ಅದನ್ನು ತೊಲಗಿಸೋಣ | ಗ್ರಾಮಸ್ಥರಿಗೆ ಪ್ರತಿಜ್ಞೆ ಮಾಡಿಸಿದ ಪೊಲೀಸರು

ಅ.3ರಿಂದ 6ನೇ ತರಗತಿಯಿಂದ ದ್ವಿತೀಯ ಪಿಯುಸಿವರೆಗೆ ಶೇ.100ರಷ್ಟು ಹಾಜರಾತಿಗೆ ಅವಕಾಶ | ಬಸವರಾಜ ಬೊಮ್ಮಾಯಿ

ಸದಾ ಹಿಂಸಿಸುವ ಮೈಕೈ ನೋವಿಗೆ ಶಾಶ್ವತ ಪರಿಹಾರ ಏನು?

ತುಪ್ಪ ಬೇಕಾ ತುಪ್ಪ ಎಂದು ಮನೆಯೊಳಗೆ ಎಂಟ್ರಿ ಕೊಡುತ್ತಿದ್ದ ಮಹಿಳೆಯರು ಅರೆಸ್ಟ್ | ಅಷ್ಟಕ್ಕೂ ಇವರು ಮಾಡ್ತಿದ್ದದ್ದೇನು ಗೊತ್ತಾ?

ಪೆಟ್ರೋಲ್, ಡೀಸೆಲ್ ಗೆ ನೀರು ಬೆರಕೆ | ಪೆಟ್ರೋಲ್ ಬಂಕ್ ಮಾಲಿಕನ ವಿರುದ್ಧ ಗ್ರಾಹಕರಿಂದ ತೀವ್ರ ಆಕ್ರೋಶ

ವಿಧಾನಮಂಡಲ ಅಧಿವೇಶನದಲ್ಲಿ  ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪಗೆ ಅತ್ಯುತ್ತಮ ಶಾಸಕ ಪ್ರಶಸ್ತಿ ಪ್ರದಾನ

ಇತ್ತೀಚಿನ ಸುದ್ದಿ