ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ: ಒಂದೇ ಕುಟುಂಬದ ನಾಲ್ವರು ಸಾವು
ಬೆಳಗಾವಿ: ರಾಜ್ಯದಲ್ಲಿ ಒಂದರ ಹಿಂದೊಂದರಂತೆ ನಡೆಯುತ್ತಿರುವ ಅಪಘಾತ ಪ್ರಕರಣಗಳು ಸಾರ್ವಜನಿಕರಿಗೆ ಆತಂಕವನ್ನುಂಟು ಮಾಡಿದ್ದು, ತುಮಕೂರು, ಧಾರವಾಡ, ಹುಬ್ಬಳ್ಳಿ ಬಳಿಕ ಇದೀಗ ಬೆಳಗಾವಿಯಲ್ಲಿ ಭೀಕರ ಅಪಘಾತವೊಂದು ಶುಕ್ರವಾರ ನಡೆದಿದ್ದು, ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಕಾರು ಮತ್ತು ಲಾರಿ ನಡುವೆ ರಾಷ್ಟ್ರೀಯ ಹೆದ್ದಾರಿ ನಾಲ್ಕರ ನಿಪ್ಪಾಣಿಯ ಸ್ಥವನಿಧಿ ಘಾಟ್ ಬಳಿ ಭೀಕರ ರಸ್ತೆ ಅಪಘಾತ ನಡೆದಿದ್ದು, ಒಂದೇ ಕುಟುಂಬದ ಓರ್ವ ಮಹಿಳೆ ಸೇರಿದಂತೆ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಲಾರಿ ವೇಗವಾಗಿ ಬಂದು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಕೂಡ ಮೃತಪಟ್ಟಿದ್ದು, ಮೃತಪಟ್ಟವರೆಲ್ಲರೂ ನಿಪ್ಪಾಣಿ ನಗರದವರೆಂದು ತಿಳಿದು ಬಂದಿದೆ.
ಘಟನಾ ಸ್ಥಳಕ್ಕೆ ನಿಪ್ಪಾಣಿ ಶಹರ ಪೊಲೀಸರು ಭೇಟಿ ನೀಡಿದ್ದು, ಕಾರಿನಿಂದ ಮೃತದೇಹಗಳನ್ನು ಹೊರ ತೆಗೆಯಲು ಹರಸಾಹಸಪಡುವಂತಾಗಿತ್ತು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ed8Qj9yS882JNjUvoz0kbs
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಮತ್ತೋರ್ವ ಬಂಗಾಳಿ ನಟಿ ಮೃತದೇಹ ಅಪಾರ್ಟ್‌ಮೆಂಟ್ ನಲ್ಲಿ ಪತ್ತೆ
ಟಿಪ್ಪು ಅರಮನೆಯನ್ನು ನಿರ್ಮಿಸಿದ್ದು ದೇವಾಲಯದ ಭೂಮಿಯಲ್ಲಿ: ಹಿಂದೂ ಜನಜಾಗೃತಿ ಸಮಿತಿ
ಒಂದು ವರ್ಷದ ಮಗುವನ್ನು ಚರ್ಚ್ ನಲ್ಲಿ ಮಲಗಿಸಿ ಪರಾರಿಯಾದ ಪೋಷಕರು!