ರಾಜ್ಯದಲ್ಲಿ ಮತ್ತೊಂದು ದಲಿತ ದೌರ್ಜನ್ಯ: ಬೆಳ್ಳಂಬೆಳಗ್ಗೆ  ದಲಿತರ ಗುಡಿಸಲುಗಳನ್ನು ಧ್ವಂಸ ಮಾಡಿದ ಅಧಿಕಾರಿಗಳು - Mahanayaka

ರಾಜ್ಯದಲ್ಲಿ ಮತ್ತೊಂದು ದಲಿತ ದೌರ್ಜನ್ಯ: ಬೆಳ್ಳಂಬೆಳಗ್ಗೆ  ದಲಿತರ ಗುಡಿಸಲುಗಳನ್ನು ಧ್ವಂಸ ಮಾಡಿದ ಅಧಿಕಾರಿಗಳು

mudhola
29/09/2021

ಮುಧೋಳ: ಮುಧೋಳದ ಹಿರಿಕೇರಿ ದುರ್ಗಾದೇವಿ ದೇವಸ್ಥಾನದ ಸಮೀಪ ದಲಿತ ಸಮುದಾಯವು ಕಳೆದ 36 ವರ್ಷಗಳಿಂದ  ವಾಸವಾಗಿದೆ. ಆದರೆ ನಿನ್ನೆ ಏಕಾಏಕಿ ಕಾರ್ಯಾಚರಣೆ ನಡೆಸಿರುವ ಅಧಿಕಾರಿಗಳು ಬಡ ದಲಿತರ ಗುಡಿಸಲುಗಳನ್ನು ತೆರವು ಮಾಡಿದ್ದು, ಇದರ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ಗುಡಿಸಲು ತೆರವಿಗೂ ಮೊದಲು ಅಧಿಕಾರಿಗಳು ಯಾವುದೇ ನೋಟಿಸ್ ಕೂಡ ನೀಡಿಲ್ಲ, ಪರ್ಯಾಯ ವ್ಯವಸ್ಥೆ ಕೂಡ ಮಾಡಿಲ್ಲ ಎಂದು ಇಲ್ಲಿನ ನಿವಾಸಿಗಳು ಆರೋಪಿಸಿದ್ದು, ಅಧಿಕಾರಿಗಳ ಬೆಳಗ್ಗಿನ ಜಾವ 5 ಗಂಟೆಯ ಸುಮಾರಿಗೆ ಏಕಾಏಕಿ ಗುಡಿಸಲುಗಳ ಮೇಲೆ ದಾಳಿ ನಡೆಸಿ ಗುಡಿಸಲುಗಳನ್ನು ಧ್ವಂಸ ಮಾಡಿದ್ದಾರೆ. ಇದರಿಂದಾಗಿ ಇಲ್ಲಿ ವಾಸಿಸುತ್ತಿದ್ದವರು ಬೀದಿಗೆ ಬರುವಂತಾಗಿದೆ.

ಗುಡಿಸಲು ತೆರವಿನಿಂದಾಗಿ ಇಲ್ಲಿ ವಾಸಿಸುತ್ತಿದ್ದ ಕುಟುಂಬಗಳಲ್ಲಿರುವ ಮಕ್ಕಳು. ಮಹಿಳೆಯರು, ಬಾಣಂತಿಯರು, ಅಶಕ್ತ ಹಿರಿಯರು ರಸ್ತೆಯಲ್ಲಿ ಜೀವಿಸುವಂತಾಗಿದೆ. ಈ ಘಟನೆಯ ಮಾಹಿತಿ ತಿಳಿದ ಭೀಮ್ ಆರ್ಮಿ ಸಂಘಟನೆ ಇದೀಗ ಇಲ್ಲಿನ ನಿವಾಸಿಗಳ ಪರವಾಗಿ ಧ್ವನಿಯೆತ್ತಿದೆ.

ಈ ಘಟನೆಯ ಬಗ್ಗೆ ಉಪ ವಿಭಾಗಾಧಿಕಾರಿಯ ಗಮನಕ್ಕೆ ತಂದಾಗ ಅವರು, ಇದನ್ನು ಪರಿಶೀಲಿಸುತ್ತೇನೆ ಎಂದು ಹೇಳಿ ಬಳಿಕ ಉಡಾಫೆಯ ಮಾತುಗಳನ್ನಾಡಿದ್ದಾರೆ ಎಂದು ಭೀಮ್ ಆರ್ಮಿ ಆರೋಪಿಸಿದೆ.  ಈ ಸಂಬಂಧ ಇಂದು ಪ್ರತಿಭಟನೆ ನಡೆಸಿದ ಭೀಮ್ ಆರ್ಮಿ ಇಲ್ಲಿನ ನಿವಾಸಿಗಳಿಗೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದೆ. ಪ್ರತಿಭಟನೆಯಲ್ಲಿ ಭೀಮ್ ಆರ್ಮಿಯ ಲವಿತ್ ಮೇತ್ರಿ, ಅನೀಲ ಬರಗಿ,ಶಿವಾನಂದ ಮ್ಯಾಗೇರಿ, ಚನ್ನಗಿರಿ ತಳಗಡೆ, ಯಲ್ಲಪ್ಪ ಹೆಗಡೆ, ಮುಜ್ಜು ಅನ್ನೋಜಿ ಮೊದಲಾದ ಮುಖಂಡರು ಭಾಗವಹಿಸಿ ಘಟನೆಯನ್ನು ಖಂಡಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/KPRE32QAEFL3ZvRW2wbYvj

ಇನ್ನಷ್ಟು ಸುದ್ದಿಗಳು…

ಮೂವರು ಮಕ್ಕಳೊಂದಿಗೆ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ತಾಯಿ | ತಾಯಿ, ಮಗಳು ದಾರುಣ ಸಾವು

ಆರೆಸ್ಸೆಸ್ ನದ್ದು ತಾಲಿಬಾನ್ ಸಂಸ್ಕೃತಿ, ಬಿಜೆಪಿಯವರಿಗೆ ಮನುಷ್ಯತ್ವ ಇಲ್ಲ | ಸಿದ್ದರಾಮಯ್ಯ ವಾಗ್ದಾಳಿ

ಚಿಕ್ಕಮಗಳೂರು: ಪ್ರವಾಸಕ್ಕೆ ತೆರಳಿದ್ದ ವಿದ್ಯಾರ್ಥಿಗಳನ್ನು ತಡೆದು ಸಂಘಪರಿವಾರದ ಸದಸ್ಯರಿಂದ ಹಲ್ಲೆ

ಅಪೌಷ್ಟಿಕತೆ ನಿರ್ಮೂಲನೆ ಪೌಷ್ಟಿಕಾಂಶ ಮಾಸಾಚರಣೆ ಅಭಿಯಾನದ ಮುಖ್ಯ ಗುರಿ | ಲಾಲಸಾಬ್ ಪೀರಾಪುರ

“ದೇವಸ್ಥಾನ ತೆರವಿಗೆ ಆದೇಶ ನೀಡಿದ್ದು ಜಿಲ್ಲಾಧಿಕಾರಿ, ವರ್ಗಾವಣೆಯಾಗಿದ್ದು ತಹಶೀಲ್ದಾರ್!”

ಕಂಡ ಕಂಡಲ್ಲಿ ಪ್ಯಾಂಟ್ ಬಿಚ್ಚುವ ಬಿಜೆಪಿ ನಾಯಕರಿಗೆ ಕಳಚಲಾಗದ ‘ಪ್ಯಾಂಟ್ ಭಾಗ್ಯ’ ನೀಡುತ್ತೇವೆ | ಕಾಂಗ್ರೆಸ್

ಯಾರ್ಯಾರದ್ದು ಏನು ಲೂಸ್​ ಆಗಿದೆ ಗೊತ್ತಿಲ್ಲ, ಸಿದ್ದರಾಮಯ್ಯ ತಲೆ ಲೂಸ್​ ಆಗಿದೆ | ಸದಾನಂದ ಗೌಡ ಕಿಡಿ

ವ್ಯಕ್ತಿಗೆ ಕೊವಿಡ್ ಲಸಿಕೆಯ ಬದಲು ರೇಬಿಸ್ ನಿರೋಧಕ ಚುಚ್ಚು ಮದ್ದು ನೀಡಿದ ನರ್ಸ್!

ಇತ್ತೀಚಿನ ಸುದ್ದಿ