ರಾಜ್ಯಾದ್ಯಂತ ಚಡ್ಡಿ ಸುಡುವ ಅಭಿಯಾನ  ಶುರು ಮಾಡ್ತೇವೆ: ಸಿದ್ದರಾಮಯ್ಯ - Mahanayaka
8:02 AM Wednesday 5 - February 2025

ರಾಜ್ಯಾದ್ಯಂತ ಚಡ್ಡಿ ಸುಡುವ ಅಭಿಯಾನ  ಶುರು ಮಾಡ್ತೇವೆ: ಸಿದ್ದರಾಮಯ್ಯ

siddaramaiha
04/06/2022

ಬೆಂಗಳೂರು:  ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರ ಮನೆಯಲ್ಲಿ ಚಡ್ಡಿಗೆ ಮಾತ್ರ ಬೆಂಕಿ ಹಚ್ಚಲಾಗಿದೆ.  ಎಲ್ಲಾದಕ್ಕೂ ಮನೆಗೆ ಬೆಂಕಿ ಹಚ್ಚುತ್ತಾರಾ? ಎಂದು  ಪ್ರಶ್ನಿಸಿರುವ ಮಾಜಿ ಸಿಎಂ ಸಿದ್ದರಾಮಯ್ಯ,  ಪ್ರತಿಭಟನೆ ಮಾಡುತ್ತಿದ್ದವರ ಮೇಲೆ ಹಲ್ಲೆ ಮಾಡಿದವರ ಮೇಲೆ ಕ್ರಮಕೈಗೊಳ್ಳಬೇಕು ಇಲ್ಲವಾದರೆ ರಾಜ್ಯಾದ್ಯಂತ ಚಡ್ಡಿ ಸುಡುವ ಅಭಿಯಾನ ಆರಂಭಿಸುತ್ತೇವೆ ಎಂದು ಹೇಳಿದ್ದಾರೆ.

ಕಾಂಗ್ರೆಸ್ ಸಭೆಯಲ್ಲಿ ಮಾತನಾಡಿದ ಅವರು, ಆರ್ ಎಸ್.ಎಸ್ ನವರು ಹಿಂದೆ ಚಡ್ಡಿ ಹಾಕುತ್ತಿದ್ದರು, ಈಗ ಪ್ಯಾಂಟ್ ಹಾಕುತ್ತಿದ್ದಾರೆ. ನಮ್ಮವರು ಪ್ರತಿಭಟನೆ ಸಂದರ್ಭದಲ್ಲಿ ಸಾಂಕೇತಿಕವಾಗಿ ಒಂದೇ ಒಂದು ಚಡ್ಡಿ ಸುಟ್ಟು ಹಾಕಿದ್ದಾರೆ. ಅದು ಪೊಲೀಸರಿಗೆ ಮತ್ತು ಸರ್ಕಾರಕ್ಕೆ ದೊಡ್ಡ ಅಪರಾಧವಾಗಿ ಕಂಡಿದೆ ಎಂದು ಹೇಳಿದ್ದಾರೆ.

ಮನೆಗೆ ಬೆಂಕಿ ಹಚ್ಚುವ ಅಥವಾ ಬೆಂಕಿಯನ್ನು ಸಮಾಜ ವಿರೋಧಿ ಕೆಲಸಕ್ಕೆ ಬಳಸಿಲ್ಲ. ಇದು ಕಾನೂನು ವಿರೋಧಿ ಕೃತ್ಯ ಹೇಗಾಗುತ್ತದೆ? ಕಾನೂನು ಉಲ್ಲಂಘನೆಗಾಗಿ ಗುಂಪುಗೂಡಿರುವುದು ಹೇಗಾಗುತ್ತದೆ ? ಒಬ್ಬರೇ ಪ್ರತಿಭಟನೆ ಮಾಡುವುದಕ್ಕಾಗುತ್ತದೆಯೇ ? ಅನ್ಯಾಯದ ವಿರುದ್ಧ, ನ್ಯಾಯಕ್ಕಾಗಿ ಹೋರಾಟ ಮಾಡುವುದು ಸಂವಿಧಾನ ನಮಗೆ ಕೊಟ್ಟ ಹಕ್ಕು.ಅದು ಮೂಲಭೂತ ಹಕ್ಕು. ಪ್ರತಿಭಟನೆ ವೇಳೆ ಆರ್’ಎಸ್ಎಸ್ ನವರ ಚಡ್ಡಿಯನ್ನು ಸುಟ್ಟು ಹಾಕಿದ್ದಾರೆ. ಒಂದೇ ಒಂದು ಚಡ್ಡಿ ಸುಟ್ಟಿದ್ದು ಪೊಲೀಸರಿಗೆ, ಸರ್ಕಾರದವರಿಗೆ ದೊಡ್ಡ ಅಪರಾಧವಾಗಿದೆ. ಅವರೇನು ಮನೆಗೆ ಬೆಂಕಿ ಹಚ್ಚೋಕೆ ಹೋಗಿರಲಿಲ್ಲ. ಕಾಂಪೌಂಡ್ ಗೇಟ್ ತೆಗೆದು ಒಳಗೆ ಹೋಗಿದ್ದಾರೆ. ಮನೆಗೆ ಪ್ರವೇಶ ಮಾಡಿಲ್ಲ. ಆಗ ಪೊಲೀಸರು ಏನು ಮಾಡುತ್ತಿದ್ದರು? ತಡೆಯಬೇಕಿತ್ತು ಅಲ್ಲವೇ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

12ರ ಬಾಲಕಿಯ ಮೇಲೆ ಲಿಫ್ಟ್ ನಲ್ಲಿ ಅತ್ಯಾಚಾರಕ್ಕೆ ಯತ್ನ

ತಲವಾರಿನಿಂದ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಣೆ: ಮೂವರು ಅರೆಸ್ಟ್

ಸೌತಡ್ಕ ಮಹಾಗಣಪತಿ ದೇಗುಲಕ್ಕೆ ಹಿಂದೂಯೇತರರ ವಾಹನ ಪ್ರವೇಶಕ್ಕೆ ನಿಷೇಧ!

ರೈತ ಮುಷ್ಕರದ ಪ್ರಭಾವವೂ ಆಳುವವರ ಕುತಂತ್ರಗಳೂ

ಇತ್ತೀಚಿನ ಸುದ್ದಿ