ರೈತರ ಹತ್ಯಾಕಾಂಡ: ಬೇಡಿಕೆ ಈಡೇರದ ಹೊರತು ಮೃತ ರೈತರ ಅಂತ್ಯಸಂಸ್ಕಾರ ಮಾಡಲ್ಲ | ರಾಕೇಶ್ ಟಿಕಾಯತ್ ಪಟ್ಟು
ಲಖಿಂಪುರ್ ಖೇರಿ: ಪ್ರತಿಭಟನಾ ನಿರತ ರೈತರ ಹತ್ಯಾಕಾಂಡಕ್ಕೆ ಕಾರಣರಾದವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು. ಮೃತರ ಕುಟುಂಬಕ್ಕೆ ಒಂದು ಕೋಟಿ ರೂ. ಪರಿಹಾರ ಮತ್ತು ಕುಟುಂಬದ ಸದಸ್ಯರಿಗೆ ಸರ್ಕಾರಿ ನೌಕರಿ ನೀಡಬೇಕು, ರಾಜ್ಯ ಸಚಿವ ಅಜಯ್ ಮಿಶ್ರಾರನ್ನು ಸಂಪುಟದಿಂದ ವಜಾಗೊಳಿಸಬೇಕು ಎಂದು ರೈತ ನಾಯಕ ರಾಕೇಶ್ ಟಿಕಾಯತ್ ಆಗ್ರಹಿಸಿದ್ದಾರೆ.
ಕೇಂದ್ರ ಗೃಹ ಇಲಾಖೆಯ ರಾಜ್ಯ ಸಚಿವ ಅಜಯ್ ಮಿಶ್ರಾರನ್ನು ಸಂಪುಟದಿಂದ ವಜಾಗೊಳಿಸಬೇಕು, ಅವರ ಪುತ್ರ ಆಶಿಶ್ ಮಿಶ್ರಾ ವಿರುದ್ಧ ಕೊಲೆ ಆರೋಪದ ಅಡಿ ಪ್ರಕರಣ ದಾಖಲಿಸಬೇಕು ಎಂದು ಟಿಕಾಯತ್ ಆಗ್ರಹಿಸಿದ್ದಾರೆ. ಈ ನಡುವೆ, ನಮ್ಮ ಬೇಡಿಕೆಗಳ ಈಡೇರುವವರೆಗೂ ಮೃತರ ಅಂತ್ಯ ಸಂಸ್ಕಾರ ಮಾಡುವುದಿಲ್ಲ ಎಂದು ರೈತರು ಪಟ್ಟು ಹಿಡಿದಿದ್ದು, ರಾಕೇಶ್ ಟಿಕಾಯತ್ ಅದಕ್ಕೆ ಬೆಂಬಲ ಸೂಚಿಸಿದ್ದಾರೆ.
ನಿನ್ನೆ ಉತ್ತರ ಪ್ರದೇಶದಲ್ಲಿ ಕೃಷಿ ಕಾಯ್ದೆಗಳಿಗೆ ವಿರೋಧ ವ್ಯಕ್ತಪಡಿಸಿ ರೈತರು ಉತ್ತರ ಪ್ರದೇಶದ ಉಪ ಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ ನಡೆಸಿದ್ದು, ಈ ವೇಳೆ ಕೇಂದ್ರ ಗೃಹ ಇಲಾಖೆಯ ರಾಜ್ಯ ಸಚಿವ ಅಜಯ್ ಮಿಶ್ರಾ ಪುತ್ರ ಆಶಿಶ್ ಮಿಶ್ರಾ ರೈತರ ಮೇಲೆ ಕಾರು ವೇಗವಾಗಿ ನುಗ್ಗಿಸಿರುವುದೇ ಅಲ್ಲದೇ ತನ್ನ ಗನ್ ನಿಂದ ರೈತರ ಮೇಲೆ ಗುಂಡು ಹಾರಿಸಿದ ಆರೋಪ ಕೂಡ ಕೇಳಿ ಬಂದಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GprkhpfFmuL8YDKlAEmru9
ಇನ್ನಷ್ಟು ಸುದ್ದಿಗಳು…
ಲಿಖಿಂಪುರ ರೈತರ ಹತ್ಯಾಕಾಂಡ: ಬಿಎಸ್ ಪಿ ನಾಯಕರನ್ನೂ ಗೃಹ ಬಂಧನದಲ್ಲಿರಿಸಲಾಗಿದೆ | ಮಾಯಾವತಿ
ಹತ್ಯೆಯಾದ 8 ರೈತರ ಕುಟುಂಬಗಳ ಭೇಟಿಗೆ ತೆರಳಿದ ಪ್ರಿಯಾಂಕಾ ಗಾಂಧಿ ಅರೆಸ್ಟ್!
ಕಾರು ಹತ್ತಿಸಿ ಪ್ರತಿಭಟನಾ ನಿರತ ಮೂವರು ರೈತರ ಭೀಕರ ಹತ್ಯೆ ಮಾಡಿದ ಕೇಂದ್ರ ಸಚಿವರ ಪುತ್ರ!
ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರಿನಲ್ಲಿ ಮುಳುಗಿ ದಾರುಣ ಸಾವು!
ಪತ್ನಿಯನ್ನು 500 ರೂಪಾಯಿಗೆ ಮಾರಾಟ ಮಾಡಿದ ಪತಿ | ಖರೀದಿಸಿದವನಿಂದ ಮಹಿಳೆಯ ಅತ್ಯಾಚಾರ