ಕಾಂಗ್ರೆಸ್ ಭ್ರಷ್ಟಾಚಾರವನ್ನು ಹುಟ್ಟು ಹಾಕಿದ ರಕ್ತ ಬೀಜಾಸುರ ಪಕ್ಷ: ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ

prahlad joshi
05/03/2023

ಚಿಕ್ಕಮಗಳೂರು: ಕಾಂಗ್ರೆಸ್ ಗೆ ಭ್ರಷ್ಟಾಚಾರದ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ, ಕಾಂಗ್ರೆಸ್ ಭ್ರಷ್ಟಾಚಾರವನ್ನು ಹುಟ್ಟು ಹಾಕಿದ ರಕ್ತ ಬೀಜಾಸುರ ಪಕ್ಷ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ ನಡೆಸಿದ್ದಾರೆ.

ಚಿಕ್ಕಮಗಳೂರಿನಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ನೆಹರೂ ಕಾಲದಿಂದ ಮನಮೋಹನ್ ಸಿಂಗ್ ಕಾಲದವರೆಗೂ ಭ್ರಷ್ಟಾಚಾರ ತಾಂಡವವಾಡ್ತಿತ್ತು. ಕಾಂಗ್ರೆಸ್ ಸರ್ಕಾರ ಲೋಕಾಯುಕ್ತವನ್ನ ಯಾಕೆ ಬಂದ್ ಮಾಡ್ತು ಎಂದು ಪ್ರಶ್ನಿಸಿದರು.

ಹಲ್ಲಿಲ್ಲದ ಹುಲಿ ಮಾಡಿ, ಎಸಿಬಿಗೂ ಪವರ್ ಇಲ್ಲದಂತೆ ಮಾಡಿದ್ರು, ನಾವು ಲೋಕಾಯುಕ್ತ ಕ್ಕೆ ಸಂಪೂರ್ಣ ಅಧಿಕಾರ ನೀಡಿದ್ದೇವೆ. ಬಿಜೆಪಿ ಭ್ರಷ್ಟಾಚಾರದ ವಿರುದ್ಧವಾಗಿದೆ, ಅದಕ್ಕೆ ಲೋಕಾಯುಕ್ತ ಬಲ ಮಾಡಿದ್ದು, ತಪ್ಪು ಮಾಡಿದವರಿಗೆ ಶಿಕ್ಷೆ ಆಗಬೇಕು,  ಯಾರನ್ನೂ ಉಳಿಸುವ ಕೆಲಸ ಮಾಡಲ್ಲ ಎಂದು ಅವರು ಹೇಳಿದರು.

ಜನ ಮತ್ತೊಮ್ಮೆ ಬಿಜೆಪಿಯ ಡಬಲ್‌ ಇಂಜಿನ್ ಸರ್ಕಾರದ ಬಯಕೆಯಲ್ಲಿದ್ದಾರೆ. ಈ ಬಾರಿ ಕಳೆದ ಬಾರಿಗಿಂತ ಹೆಚ್ಚು ಸ್ಥಾನ ಗೆಲ್ಲುತ್ತೇವೆ ಎಂದು ಇದೇ ವೇಳೆ ಅವರು ವಿಶ್ವಾಸ ವ್ಯಕ್ತಪಡಿಸಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ

Exit mobile version