ರಾಮ, ಕೃಷ್ಣ, ಶಿವ ಭಾರತದ ಮುಸ್ಲಿಮರ ಪೂರ್ವಜರು ಎಂದ ಉತ್ತರ ಪ್ರದೇಶ ಸಚಿವ!
ಬಲ್ಲಿಯಾ: ರಾಮ, ಕೃಷ್ಣ, ಶಿವ ಭಾರತದ ಮುಸ್ಲಿಮರ ಪೂರ್ವಜರಾಗಿದ್ದು, ಈ ಸಮುದಾಯದವವರು ಭಾರತೀಯ ಸಂಸ್ಕೃತಿಗೆ ತಲೆಬಾಗಬೇಕು ಎಂದು ಉತ್ತರಪ್ರದೇಶದ ಸಂಸದೀಯ ವ್ಯವಹಾರಗಳ ಸಚಿವ ಆನಂದ್ ಸ್ವರೂಪ್ ಶುಕ್ಲಾ ಹೇಳಿಕೆ ನೀಡಿದ್ದಾರೆ.
ಸಿಎಂ ಯೋಗಿ ಆದಿತ್ಯನಾಥ್ ಸರ್ಕಾರದ ನಾಲ್ಕೂವರೆ ವರ್ಷಗಳ ಸಾಧನೆಯ ಬಗ್ಗೆ ಮಾಹಿತಿ ನೀಡುವುದಾಗಿ ಸುದ್ದಿಗೋಷ್ಠಿ ಕರೆದ ಅವರು, ಈ ಹೇಳಿಕೆ ನೀಡಿದ್ದಾರೆ. ಪ್ರಧಾನಿ ಮೋದಿ, ಯೋಗಿ ಆದಿತ್ಯನಾಥ್ ಅವರು ಭಾರತೀಯ ಸಂಸ್ಕೃತಿ ಮತ್ತು ಹಿಂದು ಧ್ವಜವನ್ನು ಹಾರಿಸುವ ಮೂಲಕ ದೇಶದಲ್ಲಿ ಇಸ್ಲಾಮಿಕ್ ರಾಜ್ಯ ರಚಿಸಬೇಕು ಎಂಬ ಮನೋಭಾವದವರನ್ನು ಹಿಮ್ಮೆಟ್ಟಿದ್ದಾರೆ ಎಂದು ಅವರು ಹೇಳಿದರು.
ಶ್ರೀರಾಮ, ಕೃಷ್ಣ, ಶಂಕರ(ಶಿವ) ಭಾರತದಲ್ಲಿರುವ ಮುಸ್ಲಿಮರ ಪೂರ್ವಜರು. ಆದ್ದರಿಂದ ಮುಸ್ಲಿಮರು ಭಾರತೀಯ ಸಂಸ್ಕೃತಿಗೆ ತಲೆಬಾಗಬೇಕು. ಸಿರಿಯಾ ಮತ್ತು ಅಫ್ಘಾನಿಸ್ತಾನದ ನಂತರ ಜಗತ್ತಿನ ಬೇರೆ ಬೇರೆ ರಾಷ್ಟ್ರಗಳು ವಿಶ್ವವನ್ನೇ ಇಸ್ಲಾಮಿಕ್ ರಾಷ್ಟ್ರವಾಗಿಸಬೇಕು ಎಂದು ಬಯಸಿವೆ. ಭಾರತದಲ್ಲಿಯೂ ಇಂತಹ ಮನಸ್ಥಿತಿಯವರಿದ್ದಾರೆ. ಆದರೆ ಮೋದಿ ಮತ್ತು ಆದಿತ್ಯನಾಥ್ ಇಂತಹ ಮನಸ್ಥಿತಿಯನ್ನು ಸೋಲಿಸಿದ್ದಾರೆ ಎಂದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/KPRE32QAEFL3ZvRW2wbYvj
ಇನ್ನಷ್ಟು ಸುದ್ದಿಗಳು…
ಪೆಟ್ರೋಲ್, ಡೀಸೆಲ್ ಗೆ ನೀರು ಬೆರಕೆ | ಪೆಟ್ರೋಲ್ ಬಂಕ್ ಮಾಲಿಕನ ವಿರುದ್ಧ ಗ್ರಾಹಕರಿಂದ ತೀವ್ರ ಆಕ್ರೋಶ
ಮನಮೋಹನ್ ಸಿಂಗ್ ವಿಮಾನದಲ್ಲಿಯೇ ಪತ್ರಿಕಾಗೋಷ್ಠಿ ನಡೆಸಿದ್ದರು | ಮೋದಿ ಫೋಟೋಗೆ ಕಾಂಗ್ರೆಸ್ ತಿರುಗೇಟು
ಬೆಂಗಳೂರಿನಲ್ಲಿ ಮತ್ತೊಂದು ಭಾರೀ ಅಗ್ನಿ ದುರಂತ | ಕೆಮಿಕಲ್ ಫ್ಯಾಕ್ಟರಿಯ ಬಾಯ್ಲರ್ ಸ್ಫೋಟ