ರಾಮಮಂದಿರ ನಿರ್ಮಾಣಕ್ಕೆ ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ದೇಣಿಗೆ

18/01/2021

ನವದೆಹಲಿ: ಕಾಂಗ್ರೆಸ್ ನ ಹಿರಿಯ ನಾಯಕ ರಾಜ್ಯ ಸಭಾ ಸದಸ್ಯ ದಿಗ್ವಿಜಯ್ ಸಿಂಗ್ ಅವರು  1,11,111 ರೂ. ಮೌಲ್ಯದ ಚೆಕ್ ನ್ನು ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಹೆಸರಿನಲ್ಲಿ ನೀಡಿದ್ದು, ಈ ಮೂಲಕ ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ನೀಡಿದ್ದಾರೆ.

ಇನ್ನೂ ಈ ಸಂಬಂಧ  ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿರುವ ಅವರು,  ರಾಮ ಮಂದಿರ ನಿರ್ಮಾಣಕ್ಕೆ ಪಡೆಯುವ ದೇಣಿಗೆ ಸೌಹಾರ್ದಯುತವಾಗಿರಲಿ. ಈ ಹಿಂದೆ ದೇಣಿಗೆ ಪಡೆದುಕೊಂಡಿರುವ ವಿಶ್ವ ಹಿಂದೂ ಪರಿಷತ್ ಹಣಕಾಸಿನ ಮಾಹಿತಿಯನ್ನು ಜನ ಮುಂದಿಡಲಿ ಎಂದು ಮನವಿ ಮಾಡಿದ್ದಾರೆ.

ಇನ್ನೂ ರಾಮಮಂದಿರಕ್ಕೆ ಕಾಂಗ್ರೆಸ್ ನಾಯಕರು ದೇಣಿಗೆ ನೀಡುತ್ತಿರುವುದು ಸಾರ್ವಜನಿಕ ವಲಯದಲ್ಲಿ ಬೇರೆ ರೀತಿಯಲ್ಲಿಯೇ ಚರ್ಚೆಯಾಗುತ್ತಿದೆ. ಬಾಬರಿ ಮಸೀದಿ ಧ್ವಂಸವನ್ನು ಖಂಡಿಸಿದ್ದ  ಕಾಂಗ್ರೆಸಿಗರು ಇದೀಗ ರಾಮಮಂದಿರಕ್ಕೆ ದೇಣಿಗೆ ನೀಡುವ ಮೂಲಕ ತಮ್ಮ  ಅವಕಾಶವಾದಿತನವನ್ನು ಪ್ರದರ್ಶಿಸುತ್ತಿದ್ದಾರೆ ಎಂದು ಚರ್ಚೆಯಾಗುತ್ತಿದೆ.

ಇತ್ತೀಚಿನ ಸುದ್ದಿ

Exit mobile version