ಮತ್ತೊಂದು ಅನುಮಾನ: ರಮಣರಾವ್ ವಿರುದ್ಧ ದೂರು ದಾಖಲಿಸಿದ ಪುನೀತ್ ಅಭಿಮಾನಿ
08/11/2021
ಸದಾಶಿವನಗರ(ಬೆಂಗಳೂರು): ನಟ ಪುನೀತ್ ರಾಜ್ ಕುಮಾರ್ ಸಾವು ವೈದ್ಯಕೀಯ ನಿರ್ಲಕ್ಷ್ಯದಿಂದ ನಡೆದಿದೆ ಎಂದು ಆರೋಪಿಸಿ ಮತ್ತೊಂದು ದೂರು ದಾಖಲಾಗಿದ್ದು, ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಈ ದೂರು ದಾಖಲಾಗಿದೆ.
ಹೃದಯಾಘಾತದ ಸೂಚನೆ ಕಂಡರೂ ರಮಣರಾವ್ ವೈಜ್ಞಾನಿಕ ಚಿಕಿತ್ಸೆ ನೀಡಿಲ್ಲ. ಜೊತೆಗೆ ಹೃದಯಾಘಾತಕ್ಕೆ ಚಿಕಿತ್ಸೆ ನೀಡುವ ಸೌಲಭ್ಯಗಳಿರುವ ರಾಮಯ್ಯ ಆಸ್ಪತ್ರೆ ಸಮೀಪದಲ್ಲೇ ಇದ್ದರೂ, ವಿಕ್ರಂ ಆಸ್ಪತ್ರೆಗೆ ಹೋಗಲು ಹೇಳುವ ಮೂಲಕ ಪ್ರಾಣ ಹಾನಿಯಾಗಲು ಕಾರಣರಾಗಿದ್ದಾರೆ ಎಂದು ದೂರಲಾಗಿದೆ.
ಈ ಸಂಬಂಧ ರಮಣರಾವ್ ವಿರುದ್ಧ ತಕ್ಷಣವೇ ಕಾನೂನು ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅವರು ತಮ್ಮ ದೂರಿನಲ್ಲಿ ಒತ್ತಾಯಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka