ಧರ್ಮಾಧಾರಿತ ಮತ್ತು ರಾಜಕೀಯ ಪ್ರೇರಿತ ಹತ್ಯೆಗಳ ಬಗ್ಗೆ ವಿಶೇಷ ತನಿಖಾ ತಂಡದಿಂದ ತನಿಖೆಗೆ ರಮಾನಾಥ ರೈ ಒತ್ತಾಯ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈವರೆಗೆ ನಡೆದಿರುವ ಧರ್ಮಾಧಾರಿತ ಮತ್ತು ರಾಜಕೀಯ ಪ್ರೇರಿತ ಹತ್ಯಾ ಪ್ರಕರಣಗಳ ತನಿಖೆಗೆ ಪೊಲೀಸರ ವಿಶೇಷ ತನಿಖಾ ತಂಡ ರಚಿಸುವಂತೆ ಮಾಜಿ ಸಚಿವ ಬಿ.ರಮಾನಾಥ ರೈ ಆಗ್ರಹಿಸಿದ್ದಾರೆ.
ಅವರು ಮಂಗಳೂರು ನಗರದ ಮಲ್ಲಿಕಟ್ಟೆಯಲ್ಲಿರೋ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ನಡೆದಿರುವ ರಾಜಕೀಯ ಪ್ರೇರಿತ ಇಂತಹ ಹತ್ಯಾ ಪ್ರಕರಣಗಳನ್ನು ಸರಕಾರ ಗಂಭೀರವಾಗಿ ಪರಿಗಣಿಸಬೇಕಾಗಿದೆ. ಮುಂದೆ ಈ ರೀತಿಯ ಘಟನೆಗಳು ನಡೆಯಬಾರದು ಎಂದರು.
ಧರ್ಮಾಧಾರಿತ ರಾಜಕೀಯ ಹತ್ಯೆಗಳು ಜಿಲ್ಲೆಯಲ್ಲಿ ತುಂಬಾ ಆಗಿದೆ. ಹಿಂದು ಮತ್ತು ಮುಸ್ಲಿಂ ಸಮುದಾಯದ ಅನೇಕ ಮಂದಿ ಅಮಾಯಕರು ಪ್ರಕರಣಗಳಲ್ಲಿ ಬಲಿಯಾಗಿದ್ದಾರೆ. ಅಮಾಯಕ ಹರೀಶ್ ಪೂಜಾರಿ ಕೊಲೆ ಯಾಕೆ ಆಗಿದೆ ಎಂದು ಅವನಿಗೆ ಗೊತ್ತಿರಲಿಕ್ಕಿಲ್ಲ. ಕೇವಲ ವೋಟಿಗಾಗಿ ಅವನ ಹತ್ಯೆ ನಡೆದಿದೆ . ಶರತ್ ಮಡಿವಾಳ, ಅಶ್ರಫ್, ಜಲೀಲ್, ಪ್ರವೀಣ್ ನೆಟ್ಟಾರು, ಮಸೂದ್, ಫಾಝಿಲ್, ಪ್ರಶಾಂತ್, ಬಾಳಿಗಾ, ಹರೀಶ್ ಪೂಜಾರಿ ಹೀಗೆ ಆನೇಕ ಮಂದಿಯ ಹತ್ಯೆ ಆಗಿದೆ ಎಂದರು.
ಈ ಎಲ್ಲ ಹತ್ಯೆಗಳಲ್ಲಿ ಕಾಂಗ್ರೆಸ್ ನ ಯಾವನೇ ಒಬ್ಬ ಕಾರ್ಯಕರ್ತ ಭಾಗಿಯಾಗಿಲ್ಲ . ಆರೋಪ ಪಟ್ಟಿಯಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತನ ಹೆಸರಿಲ್ಲ. ಬಿಜೆಪಿ ಮತ್ತು ಎಸ್ ಡಿಎಪಿಯ ಕೆಲವು ಮಂದಿ ಹತ್ಯೆಯಲ್ಲಿ ಭಾಗಿಯಾಗಿರುವುದು ಬೆಳಕಿಗೆ ಬಂದಿದೆ ಎಂದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw