ಬಿಜೆಪಿ ಘಟಕದ ಕಾರ್ಯಕ್ರಮಕ್ಕೆ ಡಿಡಿಪಿಐ ಮೂಲಕ ಶಾಲಾ ಮಕ್ಕಳಿಗೆ, ಶಿಕ್ಷಕರಿಗೆ ಸುತ್ತೋಲೆ: ರಮಾನಾಥ ರೈ ಖಂಡನೆ
‘ಕನ್ನಡ ಶಾಲಾ ಮಕ್ಕಳ ಹಬ್ಬ’ ಎಂಬ ಹೆಸರಿನಲ್ಲಿ ಕೇಶವ ಸ್ಮೃತಿ ಸಂವರ್ಧನಾ ಸಮಿತಿ ಎಂಬ ಬಿಜೆಪಿ ಘಟಕವು ಸಂಘ ನಿಕೇತನದಲ್ಲಿ ನಡೆಸುತ್ತಿರುವ ಕಾರ್ಯಕ್ರಮಕ್ಕೆ ಡಿಡಿಪಿಐ ಮೂಲಕ ಸುತ್ತೋಲೆ ಹೊರಡಿಸಿ ಶಿಕ್ಷಕರಲ್ಲಿ ಮಕ್ಕಳನ್ನು ಭಾಗವಹಿಸುವಂತೆ ಕೋರಲಾಗಿದೆ. ಇದು ಅಧಿಕಾರದದ ದುರುಪಯೋಗ ಎಂದು ಮಾಜಿ ಸಚಿವ ಕಾಂಗ್ರೆಸ್ ನ ಹಿರಿಯ ನಾಯಕ ರಮಾನಾಥ ರೈ ಹೇಳಿದ್ದಾರೆ.
ಮಂಗಳೂರು ನಗರದ ಮಲ್ಲಿಕಟ್ಟೆಯಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಸರಕಾರವೇ ಇಂತಹ ಕಾರ್ಯಕ್ರಮ ಮಾಡುವುದರಲ್ಲಿ ತಪ್ಪಿಲ್ಲ. ಆದರೆ ಪಕ್ಷವೊಂದರ ಮೂಲಕ ನಡೆಸುವ ಕಾರ್ಯಕ್ರಮಕ್ಕೆ ಡಿಡಿಪಿಐ ಸುತ್ತೋಲೆ ಹೊರಡಿಸುವುದು ಖಂಡನೀಯ ಈ ಬಗ್ಗೆ ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗೆ ಮನವಿ ನೀಡಲಾಗುವುದು ಎಂದು ಮಾಜಿ ಸಚಿವ ರಮಾನಾಥ ರೈ ಹೇಳಿದರು.
ಕೇಶವ ಸ್ಮೃತಿ ದೇವರ ಹೆಸರು, ಅದಕ್ಕೆ ನಿಮ್ಮ ವಿರೋಧವೇ ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ರಮಾನಾಥ ರೈ, ನನ್ನ ಹೆಸರು ದೇವರದ್ದೇ. ನನ್ನ ತಂದೆಯವರು ಪವಿತ್ರವಾದ ಕ್ಷೇತ್ರದಲ್ಲಿ ನನಗೆ ಹೆಸರಿಟ್ಟಿದ್ದರು. ನನ್ನ ಹೆಸರು ಹೇಳಿ ಸಾಕಷ್ಟು ರೀತಿಯಲ್ಲಿ ಅಪಹಾಸ್ಯ ಮಾಡುವುದು, ಬೈಯ್ಯುವುದು ದೇವರಿಗೆ ಬೈದ ಹಾಗೆ ಅಲ್ಲವೇ ಎಂದು ನಗುತ್ತಲೇ ಮರು ಪ್ರಶ್ನಿಸಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GoQnwP3qNkmAbAPcjb8n8F
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka