ರಾಮನವಮಿ ಆಚರಿಸಿದ ಎಬಿವಿಪಿ ವಿದ್ಯಾರ್ಥಿಗಳ ಮೇಲೆ ಹಲ್ಲೆ
ಕಲಬುರಗಿ: ರಾಮನವಮಿ ಆಚರಿಸಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿರುವ ಘಟನೆ ಜಿಲ್ಲೆಯ ಆಳಂದ ತಾಲೂಕಿನ ಕಡಗಂಚಿಯಲ್ಲಿರುವ ಕೇಂದ್ರೀಯ ವಿಶ್ವವಿದ್ಯಾಲಯದ ಆವರಣದಲ್ಲಿ ನಡೆದಿದೆ.
ನಿನ್ನೆ ಮಧ್ಯಾಹ್ನ ಎಬಿವಿಪಿ ಸಂಘಟನೆಯ ವಿದ್ಯಾರ್ಥಿಗಳು ರಾಮನವಮಿ ಆಚರಿಸುತ್ತಿದ್ದ ವೇಳೆ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಲಾಗಿದೆ.
ಘಟನೆಯಲ್ಲಿ ವಿಶ್ವನಾಥ, ನರೇಂದ್ರ ಎಂಬವರಿಗೆ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿದೆ.
ಘಟನೆಗೆ ಸಂಬಂಧಿಸಿದಂತೆ ತೆಲಂಗಾಣ ಮೂಲದ ಸಾಧೀಜ್ ಹಾಗೂ ಕಲಬುರಗಿ ಮೂಲದ ರಾಹುಲ್ ಎಂಬವರ ವಿರುದ್ಧ ನರೋಣಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1duNIQRfXnJcfQKWPzNqD
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಮೊಬೈಲ್ ಗೇಮ್ ಆಡಿ ಮಾನಸಿಕ ರೋಗಿಯಾದ ವಿದ್ಯಾರ್ಥಿ: ಪ್ರಜ್ಞೆ ತಪ್ಪಿದರೂ ನಿಲ್ಲದ ಗೇಮ್
ಮುಸ್ಲಿಮ್ ವ್ಯಾಪಾರಿಯ ಮೇಲೆ ದಾಳಿ ಪ್ರಕರಣ: ಓರ್ವ ಕಿಡಿಗೇಡಿಯ ಬಂಧನ
ಇಂಧನ ಬೆಲೆ ಏರಿಕೆ: ವಿಮಾನದಲ್ಲಿ ಸ್ಮೃತಿ ಇರಾನಿ, ಕಾಂಗ್ರೆಸ್ ನಾಯಕ ನಡುವೆ ಜಟಾಪಟಿ