ರಮೇಶ್ ಜಾರಕಿಹೊಳಿ ಬೆಂಬಲಿಗರಿಂದ ಬಸ್ ಗಳಿಗೆ ಕಲ್ಲು | ಬೆಳಗಾವಿ ಬಂದ್ ಆಗುತ್ತಾ? - Mahanayaka

ರಮೇಶ್ ಜಾರಕಿಹೊಳಿ ಬೆಂಬಲಿಗರಿಂದ ಬಸ್ ಗಳಿಗೆ ಕಲ್ಲು | ಬೆಳಗಾವಿ ಬಂದ್ ಆಗುತ್ತಾ?

03/03/2021

ಬೆಳಗಾವಿ:  ಅಶ್ಲೀಲ ವಿಡಿಯೋ ವಿಚಾರವಾಗಿ ಸಚಿವ ಸ್ಥಾನಕ್ಕೆ ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡಿದ್ದು, ಇದರಿಂದ ವ್ಯಾಪಕವಾಗಿ  ಆಕ್ರೋಶ ವ್ಯಕ್ತಪಡಿಸಿರುವ ರಮೇಶ್ ಜಾರಕಿಹೊಳಿ ಬೆಂಬಲಿಗರು ಸರ್ಕಾರಿ ಬಸ್ ಮೇಲೆ ಕಲ್ಲುತೂರಾಟ ನಡೆಸಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ.

ವಿಡಿಯೋ ಬಿಡುಗಡೆ ಮಾಡಿರುವ ದಿನೇಶ್ ಕಲ್ಲಹಳ್ಳಿ ಭಾವಚಿತ್ರಕ್ಕೆ ಚಪ್ಪಲಿಯಲ್ಲಿ  ಹೊಡೆದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.  ನಗರದಲ್ಲಿ ರಮೇಶ್ ಜಾರಕಿಹೊಳಿ ಬೆಂಬಲಿಗರು ಹಲವೆಡೆ ಗಲಾಟೆ ನಡೆಸುತ್ತಿದ್ದಾರೆ ಎಂದು ಹೇಳಲಾಗಿದೆ.

ಗೋಕಾಕದಲ್ಲಿ ಪ್ರತಿಭಟನೆ ನಡೆಯುತ್ತಿದ್ದು, ಕೋಕಾಕ್ ಬಂದ್ ಆಗುವ ಸಾಧ್ಯತೆಗಳು ಕಂಡು ಬಂದಿದೆ. ಈವರೆಗೆ 8 ಬಸ್ ಗಳ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ ಎಂದು ಹೇಳಲಾಗಿದೆ.  ಬೆಳಗಾವಿ ಬಂದ್ ಆಗುವ ಸಾಧ್ಯತೆಗಳು ಸದ್ಯ ಕಂಡು ಬಂದಿದೆ.

ಇತ್ತೀಚಿನ ಸುದ್ದಿ