ರಮೇಶ್ ಜಾರಕಿಹೊಳಿ ದೈವ ಭಕ್ತ | ಅವರು ತಪ್ಪು ಮಾಡಿದ್ದಾರೆಂದು ಅನ್ನಿಸುತ್ತಿಲ್ಲ | ಸಿ.ಪಿ.ಯೋಗೇಶ್ವರ್ - Mahanayaka
5:55 AM Thursday 12 - December 2024

ರಮೇಶ್ ಜಾರಕಿಹೊಳಿ ದೈವ ಭಕ್ತ | ಅವರು ತಪ್ಪು ಮಾಡಿದ್ದಾರೆಂದು ಅನ್ನಿಸುತ್ತಿಲ್ಲ | ಸಿ.ಪಿ.ಯೋಗೇಶ್ವರ್

03/03/2021

ಮೈಸೂರು: ರಮೇಶ್ ಜಾರಕಿಹೊಳಿ ದೈವ ಭಕ್ತ. ಸಮಾಜಕ್ಕೆ ಅಂಜುವ ವ್ಯಕ್ತಿ. ಈ ರೀತಿಯ ತಪ್ಪು ಅವರು ಮಾಡಿದ್ದಾರೆ ಎಂದು ನನಗೆ ಅನ್ನಿಸುತ್ತಿಲ್ಲ ಎಂದು ಪ್ರಮಾಸೋದ್ಯಮ ಸಚಿವ ಸಿ.ಪಿ.ಯೋಗೇಶ್ವರ್ ಹೇಳಿದ್ದಾರೆ.

ರಮೇಶ್ ಜಾರಕಿಹೊಳಿ ಸಿಡಿ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಮೇಲ್ನೋಟಕ್ಕೆ ಇದೊಂದು ರಾಜಕೀಯ ಪಿತೂರಿ ಎಂಬಂತಿದೆ. ಸತ್ಯಾಸತ್ಯತೆ ಪರಿಶೀಲನೆ ಆಗುವವರೆಗೂ ನೋಡೋಣ. ಈ ವಿಚಾರದಲ್ಲಿ ನಾನು ರಮೇಶ್ ಜಾರಕಿಹೊಳಿ ಅವರ ಬೆಂಬಲಕ್ಕಿದ್ದೇನೆ ಎಂದು ಸಿ.ಪಿ.ಯೋಗೇಶ್ವರ್ ಹೇಳಿದರು.

ಸಿಡಿಯ ಸತ್ಯಾಂಶ ಹೊರ ಬರದೇ ಏನನ್ನೂ ಹೇಳಲು ಸಾಧ್ಯವಿಲ್ಲ.  ಇಂದು ಕ್ಯಾಬಿನೆಟ್ ಮೀಟಿಂಗ್ ಇದೆ.  ಈ ವಿಚಾರದ ಬಗ್ಗೆ ಸಿಎಂ ಜೊತೆಗೆ ಚರ್ಚೆ ಮಾಡುತ್ತೇವೆ ಎಂದು ಅವರು ಹೇಳಿದ್ದಾರೆ.

whatsapp

ಇತ್ತೀಚಿನ ಸುದ್ದಿ