ರಮೇಶ್ ಜಾರಕಿಹೊಳಿ ಮೇಲೆ ಇರುವ ಸಿಡಿ ಪ್ರಕರಣ ಕ್ಲಿಯರ್ ಆಗುತ್ತೆ: ಬಾಲಚಂದ್ರ ಜಾರಕಿಹೊಳಿ ವಿಶ್ವಾಸ
ಬೆಳಗಾವಿ: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ಮೇಲೆ ಇರುವ ಸಿಡಿ ಪ್ರಕರಣ ಕ್ಲಿಯರ್ ಆಗುತ್ತಿದೆ. ಇದರಿಂದಾಗಿ ಸಚಿವ ಸಂಪುಟದಲ್ಲಿ ಸ್ಥಾನ ಸಿಗುವ ನಿರೀಕ್ಷೆಯಿದೆ ಎಂದು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಾರಕಿಹೊಳಿ ವಿರುದ್ಧ ಸಣ್ಣಪುಟ್ಟ ಬೇರೆ ಬೇರೆ ಯಾವುದೋ ಕೇಸ್ ಇವೆ. ರಮೇಶ್ ಜಾರಕಿಹೊಳಿ ಅವರ ಸಿಡಿ ಕೇಸ್ ಕ್ಲಿಯರ್ ಆಗಿದೆ. ಪಕ್ಷದಲ್ಲೂ ಅದನ್ನೇ ಹೇಳುತ್ತಿದ್ದರು, ಕೇಸ್ ಕ್ಲಿಯರ್ ಆದ್ಮೇಲೆ ಮಾಡೋಣ ಅಂತಾ. ಆದಷ್ಟು ಬೇಗ ಒಳ್ಳೆಯದಾಗಲಿ ಅಂತಾ ನಾವು ಹಾರೈಸುತ್ತೇವೆ ಎಂದರು.
ಹೈಕಮಾಂಡ್ ಜೊತೆ ನಾವೇನೂ ಮಾತನಾಡಿಲ್ಲ. ರಮೇಶ್ ಅವರಿಗೆ ಒಳ್ಳೆಯದಾಗಲಿ ಅಂತಾ ಹಾರೈಸುತ್ತೇವೆ. ರಮೇಶ್ ಜಾರಕಿಹೊಳಿಗೆ ಒಳ್ಳೆಯದಾಗುತ್ತೆ ಅಂತಾ ಆಸೆ ಇಟ್ಟುಕೊಂಡಿದ್ದೇವೆ. ಏಪ್ರಿಲ್‍ನಲ್ಲಿ ಸಂಪುಟ ವಿಸ್ತರಣೆ ಮಾಡಬಹುದು ಅಂತಾ ಹೇಳ್ತಿದ್ದಾರೆ. ಆಗ ಅವಕಾಶ ಸಿಗಬಹುದು, ಬೆಳಗಾವಿ ಜಿಲ್ಲೆಗೆ ಒಳ್ಳೆಯದಾಗುತ್ತದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
ಬೆಳಗಾವಿ ಜಿಲ್ಲೆಗೆ ಎಷ್ಟು ಸಚಿವ ಸ್ಥಾನ ಕೊಡ್ತಾರೆಂಬುದು ಹೈಕಮಾಂಡ್, ಸಿಎಂಗೆ ಬಿಟ್ಟ ವಿಚಾರವಾಗಿದೆ. ಎಷ್ಟು ಮಂದಿಗೆ ಸಚಿವರನ್ನಾಗಿ ಮಾಡ್ತಾರೆ ಎಷ್ಟು ಮಂದಿಯನ್ನು ಬಿಡ್ತಾರೆ ಗೊತ್ತಿಲ್ಲ. ಹೈಕಮಾಂಡ್, ಸಿಎಂ ಕೈಗೊಳ್ಳುವ ನಿರ್ಧಾರಕ್ಕೆ ನಾವೆಲ್ಲರೂ ಬದ್ಧವಾಗಿರಬೇಕಾಗುತ್ತೇವೆ ಎಂದು ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಕರಾವಳಿ ಕಾಲೇಜ್ ವಿದ್ಯಾರ್ಥಿ ಭರತ್ ಭಾಸ್ಕರ್ ಆತ್ಮಹತ್ಯೆ: ಸೂಕ್ತ ಕ್ರಮಕ್ಕೆ ಒತ್ತಾಯ
102 ವರ್ಷದ ಮಾಜಿ ಶಿಕ್ಷಕನಿಗೆ 15 ವರ್ಷಗಳ ಜೈಲು ಶಿಕ್ಷೆ ವಿಧಿಸಿದ ಕೋರ್ಟ್!
ಕುರಿ ಮಾಂಸ ಖರೀದಿಸದಿದ್ದಕ್ಕೆ ಮಗ, ಸೊಸೆ, ಮೊಮ್ಮಕ್ಕಳಿಗೆ ಬೆಂಕಿ ಹಚ್ಚಿ ಕೊಂದೆ ಎಂದ ಪಾಪಿ!