ರಮೇಶ್ ಜಾರಕಿಹೊಳಿಗೆ ಇಂದು ಕೊರೊನಾ "ನಾಳೆ ***ಡ್ಸ್" ಎಂದ ಕಾಂಗ್ರೆಸ್ ನಾಯಕ - Mahanayaka
7:45 AM Thursday 12 - December 2024

ರಮೇಶ್ ಜಾರಕಿಹೊಳಿಗೆ ಇಂದು ಕೊರೊನಾ “ನಾಳೆ ***ಡ್ಸ್” ಎಂದ ಕಾಂಗ್ರೆಸ್ ನಾಯಕ

ramesh jarakiholi
05/04/2021

ಬೆಂಗಳೂರು: ಸಿಡಿ ಹಾಗೂ ಅತ್ಯಾಚಾರ ಪ್ರಕರಣದ ಆರೋಪಿಯಾಗಿರುವ ರಮೇಶ್ ಜಾರಕಿಹೊಳಿ ಅವರಿಗೆ  ಕೊರೊನಾ ಪಾಸಿಟಿವ್ ಆಗಿದ್ದು, ಐಸಿಯುನಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ನಡುವೆ ರಾಜ್ಯದಲ್ಲಿ ಹಲವಾರು ಬೆಳವಣಿಗೆಗಳು ಕಂಡು ಬಂದಿದ್ದು, ಇವೆಲ್ಲವೂ ನಾಟಕೀಯವಾಗಿ ಕಂಡು ಬಂದಿದೆ.

ಸೋಮವಾರ ಗೋಕಾಕ ತಾಲೂಕು ಮುಖ್ಯ ವೈದ್ಯಾಧಿಕಾರಿ ರವೀಂದ್ರ ಅಂಟಿನ್ ಅವರು ಮಾಹಿತಿ ನೀಡಿದ್ದು, ರಮೇಶ್ ಜಾರಕಿಹೊಳಿ ಕಾರು ಚಾಲಕ, ಅಡುಗೆ ಸಿಬ್ಬಂದಿಗೂ ಸೋಂಕು ತಗುಲಿದ್ದು, ಐಸೋಲೇಷನ್‌ನಲ್ಲಿದ್ದಾರೆ. ಗುರುವಾರ ರಾತ್ರಿ ರಮೇಶ್ ಜಾರಕಿಹೊಳಿ ಬೇರೆ ರಾಜ್ಯದ ಟ್ರಾವಲ್ ಹಿಸ್ಟರಿ ಇಂದ ಬಂದಿದ್ದರು. ಭಾನುವಾರ ರಾತ್ರಿ ಅವರಿಗೆ ಕೋವಿಡ್ ಪರೀಕ್ಷೆ ಮಾಡಿದಾಗ ಸೋಂಕು ತಗುಲಿರುವುದು ಖಚಿತವಾಗಿದೆ  ಎಂದು ತಿಳಿಸಿದ್ದರು.

ರಮೇಶ್ ಜಾರಕಿಹೊಳಿಗೆ ಶುಗರ್ ಮತ್ತು ಬಿಪಿ ಹೆಚ್ಚಾಗಿರುವುದರಿಂದ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅವರು 3-4 ದಿನ ಐಸಿಯುನಲ್ಲಿ ಇರಬೇಕಾಗುತ್ತದೆ ಎಂದು ಅವರು ತಿಳಿಸಿದ್ದಾರೆ.  ಸಿಡಿ ಪ್ರಕರಣದ ತನಿಖೆಗೆ ಶುಕ್ರವಾರ ರಮೇಶ್ ಜಾರಕಿಹೊಳಿ ಹಾಜರಾಗಬೇಕಿತ್ತು. ಆದರೆ, ಜ್ವರದ ಕಾರಣ ಅವರು ಹಾಜರಾಗಿರಲಿಲ್ಲ. ಸೋಮವಾರ ಎಸ್‌ಐಟಿ ಮುಂದೆ ಹಾಜರಾಗಬೇಕಿತ್ತು. ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರಣ ಸುಮಾರು 1 ವಾರಗಳ ಕಾಲ ಅವರು ಆಸ್ಪತ್ರೆಯಲ್ಲಿಯೇ ಇರಬೇಕಾಗುತ್ತದೆ ಎಂದು ಹೇಳಲಾಗಿದೆ. ಕೋರ್ಟ್ ನಲ್ಲಿ ಕೇಸ್ ವಿಚಾರಣೆಯ ಸಂದರ್ಭದಲ್ಲಿ ಇಂತಹದ್ದೊಂದು ಬೆಳವಣಿಗೆ ನಡೆದಿರುವುದು ಹಲವು ಅನುಮಾನಗಳಿಗೂ ಕಾರಣವಾಗಿದೆ.

ಆಸ್ಪತ್ರೆಗೆ ದಾಖಲಾದ ಸಂತ್ರಸ್ತೆಯ ತಾಯಿ

ಈ ನಡುವೆ ರಮೇಶ್ ಜಾರಕಿಹೊಳಿ ವಿರುದ್ಧ ಪ್ರಕರಣ ದಾಖಲಿಸಿರುವ ಯುವತಿಯ ತಾಯಿಗೂ ಅನಾರೋಗ್ಯ ಕಾಡಿದ್ದು, ಅವರು ಕೂಡ ಸಕ್ಕರೆ ಕಾಯಿಲೆಯಿಂದ ಬಳಲುತ್ತಿದ್ದರು ಎಂದು ತಿಳಿದು ಬಂದಿದೆ. ಕೈಕಾಲಿನಲ್ಲಿ ಊತ ಕಾಣಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಯುವತಿ ಸಹೋದರ, ತಾಯಿಯನ್ನು ವಿಜಯಪುರ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಇಂದು ಕೊರೊನಾ ನಾಳೆ ****ಡ್ಸ್

ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ದಿನಕ್ಕೊಂದು ನೆಪಗಳನ್ನು ಹೇಳಿ ಎಸ್‌ಐಟಿ ವಿಚಾರಣೆಯಿಂದ ತಪ್ಪಿಸಿಕೊಳ್ಳುತ್ತಿದ್ದಾರೆಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಕಾಂಗ್ರೆಸ್ ತೀವ್ರ ವಾಗ್ದಾಳಿ ನಡೆಸುತ್ತಿದೆ. ರಮೇಶ್ ಜಾರಕಿಹೊಳಿಗೆ ಕೊರೊನಾ ಪಾಸಿಟಿವ್ ಬಂದಿರುವುದಾಗಿ ಸಚಿವ ಭೈರತಿ ಬಸವರಾಜ್ ಹೇಳಿದ ಬೆನ್ನಲ್ಲೇ ಸಾಮಾಜಿಕ ಜಾಲತಾಣಗಳಲ್ಲಿ ಟಾಂಗ್ ನೀಡಿರುವ ಕಾಂಗ್ರೆಸ್ ಕಾನೂನು ಘಟಕದ ಪ್ರಧಾನ ಕಾರ್ಯದರ್ಶಿ ಸೂರ್ಯ ಮುಕುಂದರಾಜ್, ಇವತ್ತು ಕೊರೊನಾ ಇದೆ ಎಂದು ಹೇಳುತ್ತಿದ್ದಾರೆ. ನಾಳೆ ..ಡ್ಸ್!!!.. ಭೈರತಿ ಬಸವರಾಜ್ ಎಂದು ಟಾಂಗ್ ನೀಡಿದ್ದಾರೆ. ರಮೇಶ್ ಜಾರಕಿಹೊಳಿ ಇಂದು ಕೊರೊನಾ ಇದೆ ಎಂದು ವಿಚಾರಣೆಗೆ ಹಾಜರಾಗದೇ ತಪ್ಪಿಸಿಕೊಳ್ಳುತ್ತಿದ್ದಾರೆ. ನಾಳೆ ಬೇರೆ ಇನ್ನೇನು ಕಾಯಿಲೆ ಬಗ್ಗೆ ಕಾರಣ ಹೇಳುತ್ತಾರೋ ಎಂದು ಟೀಕಿಸಿದ್ದಾರೆ.

ಇತ್ತೀಚಿನ ಸುದ್ದಿ