ರಮೇಶ್ ಜಾರಕಿಹೊಳಿಗೆ ಸಚಿವ ಸ್ಥಾನ ನೀಡಬೇಕು | ಮುರುಘಾರಾಜೇಂದ್ರ ಸ್ವಾಮೀಜಿ ಆಗ್ರಹ
24/06/2021
ಗೋಕಾಕ್: ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿಗೆ ಸಚಿವ ಸ್ಥಾನ ನೀಡಬೇಕು ಎಂದು ಶೂನ್ಯ ಸಂಪಾದನಾ ಮಠದ ಪೀಠಾಧಿಪತಿ ಮುರುಘಾರಾಜೇಂದ್ರ ಸ್ವಾಮೀಜಿ ಆಗ್ರಹಿಸಿದ್ದಾರೆ.
ಮಾಧ್ಯಮ ಪ್ರತಿನಿಧಿಗಳ ಜೊತೆಗೆ ಗುರುವಾರ ಮಾತನಾಡಿದ ಅವರು, ಕರ್ನಾಟಕದಲ್ಲಿ ಈ ಬಾರಿ ಯಡಿಯೂರಪ್ಪ ನೇತೃತ್ವದ ಸರ್ಕಾರ ರಚನೆಯಾಗಲು ರಮೇಶ್ ಜಾರಕಿಹೊಳಿ ಅವರ ಪಾತ್ರ ಬಹಳ ದೊಡ್ಡದು ಎಂದು ಅವರು ಹೇಳಿದ್ದಾರೆ.
ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆಗೆ ರಮೇಶ್ ಜಾರಕಿಹೊಳಿ ಅವರೇ ಕಾರಣ ಎನ್ನುವುದನ್ನು ರಾಜ್ಯದ ಜನರು ಹಾಗೂ ಬಿಜೆಪಿಯವರೂ ಒಪ್ಪುತ್ತಾರೆ. ರಮೇಶ್ ಜಾರಕಿಹೊಳಿ ಅಭಿವೃದ್ಧಿ ವಿಷಯದಲ್ಲಿ ವೇಗದಲ್ಲಿದ್ದರು. ಇದು ಬಹಳ ಮಂದಿಗೆ ಸಹಿಸಲು ಸಾಧ್ಯವಾಗಲಿಲ್ಲ ಎಂದು ಸ್ವಾಮೀಜಿ ಹೇಳಿದರು.
ಇನ್ನೂ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರಿಸಿದ ಅವರು, ರಮೇಶ್ ಜಾರಕಿಹೊಳಿ ಆರೋಪ ಮುಕ್ತರಾಗುತ್ತಾರೆ ಎನ್ನುವ ವಿಶ್ವಾಸ ಇದೆ ಎಂದು ಹೇಳಿದರು.