ರಣರಂಗವಾದ ರೈತ ಮುಖಂಡರ ಸಭೆ: ರೈತ ಮುಖಂಡ ಟಿಕಾಯತ್ ಮೇಲೆ ಹಲ್ಲೆ, ಮಸಿ ಎರಚಿದ ಕಿಡಿಗೇಡಿ

rakesh tikait
30/05/2022

ಬೆಂಗಳೂರು:ಇಂದು ಬೆಂಗಳೂರಿನಲ್ಲಿ ನಡೆದಿದೆ ರೈತ ಮುಖಂಡರ ಸಭೆ ಅಕ್ಷರಶಃ ರಣಾಂಗಣವಾಗಿದೆ. ಕೋಡಿಹಳ್ಳಿ ಚಂದ್ರಶೇಖರ್ ಮಾಡಿರುವ ಆರೋಪಗಳಿಗೆ ಉತ್ತರ ನೀಡುತ್ತಿದ್ದ ವೇಳೆ ರೈತ ಮುಖಂಡ ರಾಕೇಶ್ ಟಿಕಾಯತ್ ಮತ್ತು ಯುದ್ಧ್ ​ವೀರ್​ ಸಿಂಗ್ ಮೇಲೆ ಕಪ್ಪು ಮಸಿ ಎರಚಲಾಗಿದೆ.

ಕರ್ನಾಟಕದ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಮಾಡಿರುವ ಆರೋಪದ ಬಗ್ಗೆ ಸ್ಪಷ್ಟನೆ ನೀಡುತ್ತಿರುವಾಗ ಟಿಕಾಯತ್ ಮತ್ತು ಸಿಂಗ್ ಮುಖಕ್ಕೆ ಮಸಿ ಎರಚಲಾಗಿದೆ. ನಾವು ಈ ಪ್ರಕರಣದಲ್ಲಿ ಭಾಗಿಯಾಗಿಲ್ಲ. ಕೋಡಿಹಳ್ಳಿ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಟಿಕಾಯತ್ ಮತ್ತು ಸಿಂಗ್ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ. ಸುದ್ದಿಗೋಷ್ಠಿ ನಡೆಯುತ್ತಿದ್ದಂತೆ ಕೆಲವರು ವಾಗ್ವಾದಕ್ಕಿಳಿದು ಮಸಿ ಎರಚಿದ್ದಾರೆ.

ಗಾಂಧಿಭವನದಲ್ಲಿ ನಡೆದ ಸುದ್ದಿ ಗೋಷ್ಠಿಯ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಕರ್ನಾಟಕ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಬಗ್ಗೆ ಪ್ರಾದೇಶಿಕ ವಾಹಿನಿಯೊಂದರ ಸ್ಟಿಂಗ್ ಆಪರೇಷನ್ ವಿಡಿಯೋ ಬಗ್ಗೆ ಟೀಕಾಯತ್ ಮಾತನಾಡುತ್ತಿದ್ದ ವೇಳೆ ಅವರ ಮೇಲೆ ಮಸಿ ಎಸೆಯಲಾಗಿದೆ.

ಪತ್ರಿಕಾಗೋಷ್ಠಿಯಲ್ಲಿ ಕೆಲವರು ವಾಗ್ವಾದಕ್ಕಿಳಿದಿದ್ದು, ಅಲ್ಲಿದ್ದ ಕುರ್ಚಿಗಳನ್ನು ಎಸೆಯಲು ಆರಂಭಿಸಿದ್ದಾರೆ. ರೈತ ಮುಖಂಡ ಚಂದ್ರಶೇಖರ್ ಬೆಂಬಲಿಗರು ಈ ಕೃತ್ಯ ಎಸಗಿದ್ದಾರೆ ಎಂದು ರಾಕೇಶ್ ಸಿಂಗ್ ಟಿಕಾಯತ್ ಅವರ ಆರೋಪ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಮಂಗಳೂರಿನ ಬೀಚ್ ನಲ್ಲಿ ನೀರುಪಾಲಾಗಿ ಮೈಸೂರಿನ ಇಬ್ಬರು ಸಾವು

ಬದಾಮ್  ಸೇವನೆ ಆರೋಗ್ಯಕ್ಕೆ ಮಾತ್ರವಲ್ಲದೆ ಸೌಂದರ್ಯಕ್ಕೂ ಉತ್ತಮ

ಟ್ಯೂಮೋಕ್‌ ಆ್ಯಪ್‌ ಮೂಲಕ ಜೂನ್‌ ತಿಂಗಳ ಬಿಎಂಟಿಸಿ ಮಾಸಿಕ ಪಾಸ್‌ ಬುಕ್‌ ಮಾಡಿ

ಹಾಡು ಕೊನೆಗೊಳಿಸುತ್ತಿದ್ದಂತೆಯೇ ವೇದಿಕೆಯಲ್ಲೇ ಪ್ರಾಣ ಬಿಟ್ಟ ಖ್ಯಾತ ಗಾಯಕ

ಇತ್ತೀಚಿನ ಸುದ್ದಿ

Exit mobile version