6 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ, ಕೊಲೆ: ಆರೋಪಿಯ ಬಂಧನ

ಬೆಂಗಳೂರು: 6 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಹತ್ಯೆ ನಡೆಸಿರುವ ಅಮಾನವೀಯ ಘಟನೆಯೊಂದು ಬೆಂಗಳೂರಿನ ರಾಮಮೂರ್ತಿ ನಗರದ ಹೊಯ್ಸಳ ನಗರದಲ್ಲಿ ನಡೆದಿದೆ.
ಬಿಹಾರ ಮೂಲದ ಅಭಿಷೇಕ್ ಕುಮಾರ್(25) ಕೃತ್ಯ ಎಸಗಿದ ಆರೋಪಿಯಾಗಿದ್ದಾನೆ. ಘಟನೆಯ ಬೆನ್ನಲ್ಲೇ ಆರೋಪಿಯನ್ನು ರಾಮಮೂರ್ತಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಸೋಮವಾರ ರಾತ್ರಿ 7:30ರ ಸುಮಾರಿಗೆ ಈ ಘಟನೆ ನಡೆದಿದೆ. ಬಾಲಕಿಯ ಪೋಷಕರು ಗಾರೆ ಕೆಲಸಕ್ಕೆ ಹೋಗಿದ್ದರು. ಹೀಗಾಗಿ ಮನೆಯಲ್ಲಿ ಯಾರೂ ಇರಲಿಲ್ಲ. ಇದೇ ವೇಳೆ ಮನೆಗೆ ಬಂದ ಅಭಿಷೇಕ್ ಬಾಲಕಿಯನ್ನು ಪುಸಲಾಯಿಸಿ ಕರೆದೊಯ್ದು ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ್ದಾನೆ. ಅತ್ಯಾಚಾರ ಎಸಗುವ ವೇಳೆಯೇ ಬಾಲಕಿ ನರಳಾಡಿ ಸಾವನ್ನಪ್ಪಿದ್ದಾಳೆ.
ಆರೋಪಿ ಅಭಿಷೇಕ್ ಕುಮಾರ್ ಕೂಡ ಗಾರೆ ಕೆಲಸ ಮಾಡಿಕೊಂಡಿದ್ದನು. ಸದ್ಯ ಆರೋಪಿಯನ್ನು ಬಂಧಿಸಿರುವ ಪೊಲೀಸರು ಕಾನೂನು ಕ್ರಮಕೈಗೊಂಡಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: