ಪಾನಿಪುರಿ ಆಸೆ ತೋರಿಸಿ ಬಾಲಕಿಯ ಮೇಲೆ ಅತ್ಯಾಚಾರ: ಆರೋಪಿ ಅರೆಸ್ಟ್
ಬೆಂಗಳೂರು: ಪಾನಿಪುರಿಯ ಆಸೆ ತೋರಿಸಿ 7 ವರ್ಷದ ಬಾಲಕಿಯನ್ನುಅತ್ಯಾಚಾರವೆಸಗಿದ ಘಟನೆ ಬೆಂಗಳೂರಿನ ಅಶೋಕನಗರದ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಬಾಲಕಿಯ ತಾಯಿ ಮೂಕರಾಗಿದ್ದು, ತಾಯಿ ಹಾಗೂ ಬಾಲಕಿ ಪ್ರತಿಷ್ಠಿತ ಮಾಲ್ ವೊಂದರ ಬಳಿ ಭಿಕ್ಷೆ ಬೇಡಿ ಜೀವನ ಸಾಗಿಸುತ್ತಿದ್ದರು.
ಈ ವೇಳೆ ಆರೋಪಿಯು ಬಾಲಕಿಗೆ ಪಾನಿಪುರಿಯ ಕೊಡಿಸುವುದಾಗಿ ನಂಬಿಸಿ ಕರೆದೊಯ್ದು ಮೆಗ್ರತ್ ರೋಡ್ ಬಳಿ ನಿಂತಿದ್ದ ಹಿಟಾಚಿಯ ಬಳಿ ಬಾಲಕಿಯನ್ನು ಅತ್ಯಾಚಾರವೆಸಗಿದ್ದಾನೆ.
ಅತ್ಯಾಚಾರದಿಂದಾಗಿ ಬಾಲಕಿಗೆ ರಕ್ತಸ್ರಾವವಾಗಿದ್ದು, ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಸಂಬಂಧ ಪ್ರಕರಣ ದಾಖಲಿಸಿದ ಅಶೋಕನಗರ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth