ರಾಸಲೀಲೆ ವಿಷಯ ಇಡೀ ದೇಶಕ್ಕೆ ಗೊತ್ತಾಗಿದೆ | ಮಾನ ಮರ್ಯಾದೆ ಇದ್ದರೆ ರಾಜೀನಾಮೆ ಪಡೆಯಿರಿ | ಸರ್ಕಾರಕ್ಕೆ ಚಾಟಿ ಬೀಸಿದ ಸಿದ್ದರಾಮಯ್ಯ - Mahanayaka
10:23 AM Thursday 12 - December 2024

ರಾಸಲೀಲೆ ವಿಷಯ ಇಡೀ ದೇಶಕ್ಕೆ ಗೊತ್ತಾಗಿದೆ | ಮಾನ ಮರ್ಯಾದೆ ಇದ್ದರೆ ರಾಜೀನಾಮೆ ಪಡೆಯಿರಿ | ಸರ್ಕಾರಕ್ಕೆ ಚಾಟಿ ಬೀಸಿದ ಸಿದ್ದರಾಮಯ್ಯ

03/03/2021

ಬೆಂಗಳೂರು: ಸರ್ಕಾರಕ್ಕೆ ಮಾನ ಮರ್ಯಾದೆ ಇದ್ದರೆ, ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ರಾಜೀನಾಮೆಯನ್ನು ಪಡೆದುಕೊಳ್ಳಲಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನ ಕೆಪಿಸಿಸಿ ಆಯೋಜಿಸಿರುವ ಜನ-ಧ್ವನಿ ಜಾಥಾ ಕಾರ್ಯಕ್ರಮದ ಉದ್ಘಾಟನೆಗೂ ಮೊದಲು ಈ ಬಗ್ಗೆ ಮಾತನಾಡಿದ ಅವರು, ರಮೇಶ್ ಜಾರಕಿಹೊಳಿ ರಾಜೀನಾಮೆ ತಕ್ಷಣ ಪಡೆಯುವಂತೆ ಸರ್ಕಾರವನ್ನು ಒತ್ತಾಯಿಸಿದರು.

ಇಡೀ ದೇಶಕ್ಕೆ ರಮೇಶ್ ರಾಸಲೀಲೆ ಗೊತ್ತಾಗಿದೆ. ಹೀಗಾಗಿ ತಕ್ಷಣ ಪ್ರಕರಣದ ಕುರಿತು ಎಫ್‌ಐಆರ್ ದಾಖಲಾಗಬೇಕು. ಸೂಕ್ತ ತನಿಖೆ ನಡೆಯಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

whatsapp

ಇತ್ತೀಚಿನ ಸುದ್ದಿ