ರಾಷ್ಟ್ರಭಕ್ತರ ಪ್ರತಿಮೆ ಧ್ವಂಸ; ಪುಂಡರ ವಿರುದ್ಧ ಕಠಿಣ ಕ್ರಮ: ಸಿಎಂ ಬೊಮ್ಮಾಯಿ
ಹುಬ್ಬಳ್ಳಿ: ಬೆಳಗಾವಿಯಲ್ಲಿ ಪುಂಡರು ನಡೆಸಿದ ಪುಂಡಾಡಿಕೆಯನ್ನು ಸಂಪೂರ್ಣವಾಗಿ ಖಂಡಿಸುತ್ತೇನೆ, ಕಾನೂನು ಸುವ್ಯವಸ್ಥೆಗೆ ಯಾರೇ ಧಕ್ಕೆ ತಂದರೂ ಅಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಈಗಾಗಲೇ ಗೃಹ ಸಚಿವರಿಗೆ ಸೂಚನೆ ನೀಡಿದ್ದು, ಅವರು ಅಧಿಕಾರಿಗಳಿಗೆ ಸೂಚನೆ ನೀಡುವ ಮೂಲಕ ಈಗಾಗಲೇ 27 ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಕೇವಲ ಬಂಧಿಸುವುದು ಮಾತ್ರವಲ್ಲ, ಇನ್ನಷ್ಟು ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ. ಈ ತರಹದ ಘಟನೆಗಳು ಕಲ್ಲು ತೂರಾಟ ನಡೆಸುವುದು, ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ ಹಾನಿಯನ್ನುಂಟುಮಾಡುವುದು, ಸರ್ಕಾರದ ವಾಹನಗಳನ್ನು ಧ್ವಂಸ ಮಾಡುವುದು ಕಾನೂನುಬಾಹಿರ ಚಟುವಟಿಕೆ. ಈ ತರಹದ ಘಟನೆಗಳು ಪುನರಾವರ್ತಿಸದಂತೆ ದೀರ್ಘಾವಧಿ ಕ್ರಮ ಕೈಗೊಳ್ಳಲು ಪೊಲೀಸರಿದೆ ಸೂಚನೆ ನೀಡಿದ್ದೇನೆ ಎಂದರು.
ದೇಶಭಕ್ತರ ಪ್ರತಿಮೆಯನ್ನು ನಿರ್ಮಿಸಿ ಒಂದು ಕಡೆ ಪ್ರತಿಷ್ಠಾಪಿಸುವುದು ಅವರ ಮೇಲಿನ ಗೌರವಕ್ಕೆ, ಅವರ ಗೌರವವನ್ನು ಉಳಿಸಿಕೊಳ್ಳುವ ಕೆಲಸ ನಾವು ಮಾಡಬೇಕು, ದೇಶಭಕ್ತರ ಹೆಸರಿಗೆ ಮಸಿಬಳಿದು ಸಮಾಜದಲ್ಲಿ ಕ್ಷೋಭೆಯನ್ನುಂಟುಮಾಡುವುದು ಸರಿಯಲ್ಲ ಎಂದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಕ್ರಿಯೆಗೆ ಪ್ರತಿಕ್ರಿಯೆ ಎಂಬ ಮೊಂಡುವಾದ ಮಂಡಿಸಬೇಡಿ, ಕಾನೂನು ಕ್ರಮಕೈಗೊಳ್ಳಿ: ಸಿಎಂಗೆ ಸಿದ್ದರಾಮಯ್ಯ ಮನವಿ
ಭಿಕ್ಷಾಟನೆಗೆ ಬಳಕೆಯಾಗುತ್ತಿದ್ದ 28 ಮಕ್ಕಳ ರಕ್ಷಣೆ: ಕೋಟಾ ಶ್ರೀನಿವಾಸ್ ಪೂಜಾರಿ
ಸಂಗೊಳ್ಳಿ ರಾಯಣ್ಣ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು: ಘಟನಾ ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್