ರಾಷ್ಟ್ರಧ್ವಜಕ್ಕೆ ಅಗೌರವ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ವಿರುದ್ಧ ಪ್ರಕರಣ ದಾಖಲು - Mahanayaka
3:07 PM Wednesday 5 - February 2025

ರಾಷ್ಟ್ರಧ್ವಜಕ್ಕೆ ಅಗೌರವ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ವಿರುದ್ಧ ಪ್ರಕರಣ ದಾಖಲು

jp nadda
15/09/2021

ಮುಝಫ್ಫರ್ ಪುರ:  ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದ ಆರೋಪದ ಮೇಲೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ವಿರುದ್ಧ ಪ್ರಕರಣ ದಾಖಲಾಗಿದ್ದು,  ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ ಅವರ ಪಾರ್ಥಿವ ಶರೀರಕ್ಕೆ ಗೌರವ ಸಲ್ಲಿಸುವ ವೇಳೆ ರಾಷ್ಟ್ರಧ್ವಜಕ್ಕೆ ಅವಮಾನ ಮಾಡಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ರಾಷ್ಟ್ರಧ್ವಜಕ್ಕೆ ಜೆ.ಪಿ.ನಡ್ಡ ಅಗೌರವ ಸೂಚಿಸಿದ್ದಾರೆಂದು ಚಿತ್ರಗಳ ಸಹಿತ ಸಿಕಂದರ್ ಪುರ ನಿವಾಸಿ ಚಂದ್ರಶೇಖರ್ ಪರಾಶರ್ ಅವರು  ಮುಝಫರ್ ಪುರ ಮುಖ್ಯ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದ್ದು, ಅಂತ್ಯಕ್ರಿಯೆಗೂ ಮೊದಲು ಲ್ಯಾಣ್ ಸಿಂಗ್ ಅವರ ಪಾರ್ಥಿವ ಶರೀರದ ಮೇಲೆ ಬಿಜೆಪಿ ಧ್ವಜವನ್ನು ತ್ರಿವರ್ಣ ಧ್ವಜದ ಮೇಲೆ ಇಟ್ಟು ರಾಷ್ಟ್ರಧ್ವಜಕ್ಕೆ ಅಗೌರವ ತೋರಲಾಗಿದೆ ಎಂದು ಅವರು ಆರೋಪಿಸಿದ್ದಾರೆ.

ಬಿಜೆಪಿಯು ಈ ಕೃತ್ಯವನ್ನು ಉದ್ದೇಶ ಪೂರ್ವಕವಾಗಿಯೇ  ಮಾಡಿದೆ. ಈ ಕೃತ್ಯ ರಾಷ್ಟ್ರಧ್ವಜಕ್ಕೆ ಮಾಡಿರುವ ಅವಮಾನ ಎಂದು ಅರ್ಜಿದಾರರು ಹೇಳಿದ್ದಾರೆ. ಅರ್ಜಿಯ ಜೊತೆಗೆ ಕೆಲವು ಫೋಟೋಗಳನ್ನು ಕೂಡ ಸಲ್ಲಿಸಲಾಗಿದೆ. ಈ ಪ್ರಕರಣದ ವಿಚಾರಣೆಯನ್ನು ನ್ಯಾಯಾಲಯ ಇನ್ನೂ ಕೈಗೆತ್ತಿಕೊಂಡಿಲ್ಲ. ಶೀಘ್ರವೇ ವಿಚಾರಣೆಗೆ ದಿನಾಂಕ ನಿಗದಿಯಾಗಲಿದೆ ಎನ್ನಲಾಗುತ್ತಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ.

ಇನ್ನಷ್ಟು ಸುದ್ದಿಗಳು…

ಕೃಷಿ ಅಧ್ಯಯನಕ್ಕಾಗಿ ಫಾರ್ಮ್ ಹೌಸ್ ಗೆ ಹೋಗಿದ್ದ ವೈದ್ಯೆ ಕೃಷಿ ಹೊಂಡದಲ್ಲಿ ಮುಳುಗಿ ಸಾವು!

ಫ್ಲೈಓವರ್ ಮೇಲೆ ಬೈಕ್ ಗೆ ಡಿಕ್ಕಿ ಹೊಡೆದ ಕಾರು: 40 ಅಡಿ ಎತ್ತರದಿಂದ ಕೆಳಗೆ ಬಿದ್ದ ಬೈಕ್ ಸವಾರರು

ಅವಸರದಿಂದ ದೇವಸ್ಥಾನಗಳನ್ನು ಒಡೆಯಬೇಡಿ: ಸಿಎಂ ಬಸವರಾಜ ಬೊಮ್ಮಾಯಿ ಸೂಚನೆ

ವರ ನೀರು ತರಲು ಹೋಗಿ ವಾಪಸ್ ಬರುವಷ್ಟರಲ್ಲಿ ನವವಧು ಎಸ್ಕೇಪ್!

ಮಸೀದಿ, ಚರ್ಚ್, ದೇವಸ್ಥಾನ ಅಂತ ಇಲ್ಲ,  ಯಾವುದೇ ಇದ್ದರೂ ತೆರವು ಮಾಡುತ್ತೇವೆ | ರಾಮನಗರ ಡಿಸಿ

ಪ್ರಧಾನಿ ಮೋದಿ ಖಾತೆಗೆ ಹಣ ಹಾಕಿದ್ದಾರೆ ಎಂದು ಭಾವಿಸಿ ಖರ್ಚು ಮಾಡಿ ಜೈಲು ಸೇರಿದ ಯುವಕ!

ಆಸ್ತಿಗಾಗಿ ಸಹೋದರರ ಜಗಳ: ಕಟ್ಟಡದ ಮೇಲಿನಿಂದ ಓರ್ವ ಸಹೋದರನನ್ನು ಕೆಳಕ್ಕೆಸೆಯಲು ಯತ್ನ

ಶಾಕಿಂಗ್ ನ್ಯೂಸ್: ನಡೆದುಕೊಂಡು ಹೋಗುತ್ತಿದ್ದ ಯುವತಿಯ ಖಾಸಗಿ ಅಂಗ ಮುಟ್ಟಿ ಹಾಡಹಗಲೇ ಲೈಂಗಿಕ ಕಿರುಕುಳ!

ಇತ್ತೀಚಿನ ಸುದ್ದಿ