12:13 PM Wednesday 12 - March 2025

ರಾಷ್ಟ್ರಧ್ವಜದ ಬಗ್ಗೆ ವಿವಾದಾತ್ಮಕ ಹೇಳಿಕೆ: ಸಚಿವ ಈಶ್ವರಪ್ಪ ಒಬ್ಬ ಅವಿವೇಕಿ; ಮನೋಹರ್‌

congres protest
17/02/2022

ಬೆಂಗಳೂರು: ಸಚಿವ ಕೆ.ಎಸ್​.ಈಶ್ವರಪ್ಪ ರಾಷ್ಟ್ರಧ್ವಜದ ಬಗ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಇಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ ಬೆಂಬಲಿಗರು ಪ್ರತಿಭಟನೆ ನಡೆಸಿದ್ದಾರೆ.
ಬೆಂಗಳೂರಿನ ಶಿವಾನಂದಸರ್ಕಲ್ ಬಳಿಯ ಈಶ್ವರಪ್ಪ ನಿವಾಸದ ಮುಂದೆ ಕಾಂಗ್ರೆಸ್​ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಕಾಂಗ್ರೆಸ್ ಮುಖಂಡ ಮನೋಹರ್​, ಕೆ.ಎಸ್. ಈಶ್ವರಪ್ಪ ಒಬ್ಬ ಅವಿವೇಕಿ. ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದ್ದಾರೆ. ಅವರು ಮೊದಲು ರಾಜೀನಾಮೆ ನೀಡಬೇಕು. ಇದುವರೆಗೆ ಈಶ್ವರಪ್ಪರನ್ನ ಯಾಕೆ ಬಂಧಿಸಿಲ್ಲ. ನಿಷ್ಪಕ್ಷಪಾತವಾಗಿ ತನಿಖೆಗೆ ಒತ್ತಾಯಿಸಿದ್ದೆವು. ದೂರು ಕೊಟ್ಟರೂ ಬಂಧಿಸಿಲ್ಲ ಎಂದು ಪ್ರಶ್ನಿಸಿದರು.

ಸದನದಲ್ಲಿ ಸಭಾಧ್ಯಕ್ಷ ಕಾಗೇರಿ ಏ..ಡಿಕೆ ಎಂದು‌ ಕೂಗಿದ್ದಾರೆ. ಸಭಾಧ್ಯಕ್ಷರು ತಾವು ಗೂಂಡಾನಾ ಎಂಬುದನ್ನು ಸ್ಪಷ್ಟಪಡಿಸಬೇಕು. ಕಾಂಗ್ರೆಸ್ ಬಗ್ಗೆ ಕುಮಾರಸ್ವಾಮಿ ಲಘುವಾಗಿ ಮಾತನಾಡಿದ್ದಾರೆ. ಕುಮಾರಸ್ವಾಮಿ ಜೆಡಿಎಸ್ ಪಕ್ಷವನ್ನು ಮೊದಲು ವಿಸರ್ಜಿಸಿ ಬಿಜೆಪಿ ಜೊತೆ ವಿಲೀನ ಮಾಡಿಕೊಳ್ಳಲಿ ಎಂದು ಅವರು ಇದೇ ವೇಳೆ ವಾಗ್ದಾಳಿ ನಡೆಸಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಆಫ್‍ಲೈನ್ ತರಗತಿಗೆ ಹೋಗುವಂತೆ ಪೋಷಕರು ಒತ್ತಾಯಿಸಿದ್ದಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆ

ಫೆ. 19ರಂದು ಬಳ್ಳಾಜೆ-ಕೊಳವೂರು ಶ್ರೀ ಸತ್ಯಸಾರಮಾನಿ ದೈವಸ್ಥಾನದ ವಾರ್ಷಿಕ ನೇಮೋತ್ಸವ

ಸರ್ಕಾರಿ ನೌಕರನ ಎರಡನೇ ಪತ್ನಿಗೆ ಪಿಂಚಣಿ ಇಲ್ಲ | ಬಾಂಬೆ ಹೈಕೋರ್ಟ್

ಜಾಗಟೆ, ಗಂಟೆಯಿಂದ ಶಬ್ದ ಮಾಲಿನ್ಯ: ಆದೇಶ ವಾಪಸ್ ಪಡೆಯಲಾಗಿದೆ | ಅರಗ ಜ್ಞಾನೇಂದ್ರ 

ಇತ್ತೀಚಿನ ಸುದ್ದಿ

Exit mobile version