KSRTC ಬಸ್ ಮತ್ತು ಆಟೋ ಡಿಕ್ಕಿ: ಮದುಮಗ ಸೇರಿದಂತೆ ಮೂವರ ದಾರುಣ ಸಾವು
ಮೈಸೂರು: KSRTC ಬಸ್ ಹಾಗೂ ಆಟೋ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಮದುಮಗ ಸೇರಿದಂತೆ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮೈಸೂರು-ಟಿ.ನರಸೀಪುರ ಹೆದ್ದಾರಿಯಲ್ಲಿ ನಡೆದಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ
30 ವರ್ಷ ವಯಸ್ಸಿನ ಇಮ್ರಾನ್ ಪಾಷಾ, 28 ವರ್ಷ ವಯಸ್ಸಿನ ಯಾಸ್ಮಿನ್ ಹಾಗೂ 2 ವರ್ಷದ ಬಾಲಕ ಅಫ್ನಾನ್ ಅಪಘಾತಕ್ಕೆ ಬಲಿಯಾದವರಾಗಿದ್ದಾರೆ. ಘಟನೆಯಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ. ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಅಕ್ಟೋಬರ್ 24ರಂದು ಇಮ್ರಾನ್ ಪಾಷಾಗೆ ಮದುವೆ ನಿಶ್ಚಯವಾಗಿತ್ತು. ಬಟ್ಟೆ ಖರೀದಿಗೆ ಕುಟುಂಬ ಸಮೇತ ಮೈಸೂರಿಗೆ ಬರುತ್ತಿದ್ದ ವೇಳೆ ವರಕೋಡು ಸಮೀಪದ ಹಾಸ್ಟೆಲ್ ಬಳಿ ತಿರುವಿನಲ್ಲಿ ಬಸ್ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಆಟೋ ಸಂಪೂರ್ಣ ಜಖಂಗೊಂಡಿದೆ. ವರುಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ದುರ್ಘಟನೆ ನಡೆದಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಇನ್ನಷ್ಟು ಸುದ್ದಿಗಳು…
ಮೋದಿ ಸರ್ಕಾರ ಕಾರ್ಮಿಕ, ರೈತ ಕಾನೂನುಗಳನ್ನು ದುರ್ಬಲಗೊಳಿಸುತ್ತಿದೆ | CPIM ಮುಖಂಡ ವಸಂತ ಆಚಾರಿ
ಮನೆಯ ಗೋಡೆ ಕುಸಿದು ಒಂದೇ ಕುಟುಂಬದ ಐವರು ಸಾವು | ಇಬ್ಬರು ಮಕ್ಕಳ ಸ್ಥಿತಿ ಗಂಭೀರ
ತುಮಕೂರು: ಚಿತ್ರಕಲಾ ಮಹಾವಿದ್ಯಾಲಯಕ್ಕೆ ಸ್ವಂತ ನಿವೇಶನ ಮಂಜೂರು ಮಾಡಲು ಸರ್ಕಾರಕ್ಕೆ ಮನವಿ
ಪೊಲೀಸರು ನನ್ನ ಬೆನ್ನು ಮುರಿಯುವಂತೆ ಹೊಡೆದಿದ್ದರು | ಹಳೆಯ ನೆನಪು ಹಂಚಿಕೊಂಡ ಗೃಹ ಸಚಿವರು
ವಿಚಿತ್ರ ಫೋಟೋ ಹಂಚಿಕೊಂಡು ಅಭಿಮಾನಿಗಳ ತಲೆಗೆ ಹುಳ ಬಿಟ್ಟ ಮೋಹಕ ತಾರೆ ರಮ್ಯಾ!
ಮನೆಯ ಒಳಗೆ ನುಗ್ಗಿ ಮಗುವನ್ನು ಹೊತ್ತೊಯ್ಯಲು ಯತ್ನಿಸಿದ ಚಿರತೆ | ಆತಂಕದಲ್ಲಿ ಗ್ರಾಮಸ್ಥರು