ರಸ್ತೆ ಬದಿ ನಿಲ್ಲಿಸಿದ್ದ ವಾಹನಗಳಿಗೆ ಡಿಕ್ಕಿ ಹೊಡೆದು ಪೆಟ್ರೋಲ್ ಬಂಕ್ ಗೆ ನುಗ್ಗಿದ ಲಾರಿ
ಚಾಲಕನ ನಿಯಂತ್ರಣ ತಪ್ಪಿದ ಲಾರಿಯೊಂದು ರಸ್ತೆ ಬದಿ ನಿಲ್ಲಿಸಿದ್ದ ವಾಹನಗಳಿಗೆ ಡಿಕ್ಕಿ ಹೊಡೆದ ಬಳಿಕ ಪೆಟ್ರೋಲ್ ಬಂಕಿಗೆ ನುಗ್ಗಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಿ.ಸಿ.ರೋಡ್ ಎಂಬಲ್ಲಿ ನಡೆದಿದೆ.
ಲಾರಿ ಚಾಲಕನಿಗೆ ಚಾಲನೆ ಸಮಯದಲ್ಲಿ ಮೂರ್ಛೆ ರೋಗ ಬಾಧಿಸಿ ಈ ಅವಘಡ ಸಂಭವಿಸಿದೆ ಎಂದು ತಿಳಿದುಬಂದಿದೆ. ಸರಣಿ ಅಪಘಾತ ನಡೆದರೂ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಪೆಟ್ರೋಲ್ ಬಂಕಿನಲ್ಲಿ ಪೆಟ್ರೋಲ್ ತುಂಬಿಸಲು ನಿಂತಿದ್ದ ಕಾರಿಗೆ ಡಿಕ್ಕಿ ಹೊಡೆದ ಲಾರಿ ಬಳಿಕ ಬೈಕ್ ಸಹಿತ ರಸ್ತೆ ಬದಿ ನಿಲ್ಲಿಸಿದ್ದ ಕೆಲವು ವಾಹನಗಳಿಗೆ ಡಿಕ್ಕಿ ಹೊಡೆದು ನಂತರ ಪೆಟ್ರೋಲ್ ಬಂಕಿಗೆ ನುಗ್ಗಿದೆ.
ಮಂಗಳೂರು ಕಡೆಯಿಂದ ಹಾಸನಕ್ಕೆ ತೆರಳುತ್ತಿದ್ದ ವೇಳೆ ಲಾರಿ ಚಾಲಕನಿಗೆ ನಿಯಂತ್ರಣ ಕಳೆದುಕೊಂಡ ಪರಿಣಾಮ ಈ ಅವಘಡ ಸಂಭವಿಸಿದೆ. ಲಾರಿ ಚಾಲಕನನ್ನು ಲಕ್ಷಣ್ ಎಂದು ಗುರುತಿಸಲಾಗಿದೆ. ಈತನನ್ನು ತಕ್ಷಣ ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw