ರಸ್ತೆಗೆ ಉರುಳಿ ಬಿದ್ದಿದ್ದ ಮರಕ್ಕೆ ಬೈಕ್ ಡಿಕ್ಕಿ: ಬೈಕ್ ಸವಾರ ಸಾವು
ಧರ್ಮಸ್ಥಳ: ರಸ್ತೆಯಲ್ಲಿ ಉರುಳಿ ಬಿದ್ದ ಮರಕ್ಕೆ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಬುಧವಾರ ಬೆಳಿಗ್ಗೆ ಧರ್ಮಸ್ಥಳದ ಸ್ನಾನಘಟ್ಟ ಸಮೀಪ ನಡೆದಿದೆ.
ಮೃತ ವ್ಯಕ್ತಿಯು ಧರ್ಮಸ್ಥಳದ ಸ್ನಾನಘಟ್ಟ ಸಮೀಪ ಹೊಟೇಲ್ ನಡೆಸುತ್ತಿದ್ದ ಓಡಿಲ್ನಾಲ ಮುಗುಳಿಚತ್ರ ನಿವಾಸಿ ವಸಂತ್ ಕುಮಾರ್ ಜೈನ್(42) ಎಂದು ಗುರುತಿಸಲಾಗಿದೆ. ಬೈಕಿನಿಂದ ಬಿದ್ದ ರಭಸಕ್ಕೆ ತಲೆಯು ರೋಡಿಗೆ ತಾಗಿದ್ದು,ಹೆಲ್ಮೆಟ್ ಧರಿಸದೆ ಇದ್ದದು ಕೂಡ ಸಾವಿಗೆ ಕಾರಣವಾಗಿದೆ.
ಇವರು ಬೆಳಗಿನ ಜಾವ ಧರ್ಮಸ್ಥಳದಿಂದ ಸ್ನಾನಘಟ್ಟದ ಕಡೆಗೆ ತನ್ನ ಬೈಕ್ ನಲ್ಲಿ ಬರುತ್ತಿದ್ದ ವೇಳೆ ರಸ್ತೆಯಲ್ಲಿ ಮುರಿದು ಬಿದ್ದಿದ್ದ ಮರವನ್ನು ಗಮನಿಸದೆ ಢಿಕ್ಕಿ ಹೊಡೆದಿದ್ದು, ವ್ಯಕ್ತಿಯು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಬೆಳ್ತಂಗಡಿ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LSRN1q7jVDz3PsMb1GzrwE
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಏಕಾಏಕಿ ಹೃದಯ ಬಡಿತ ಹೆಚ್ಚಳ: ಆಸ್ಪತ್ರೆಗೆ ದಾಖಲಾದ ದೀಪಿಕಾ ಪಡುಕೋಣೆ
ಸಾಮಾಜಿಕ ಜಾಲತಾಣದಲ್ಲಿ ಪ್ರವಾದಿ ಬಗ್ಗೆ ಅವಹೇಳನ: ಯುವಕ ಅರೆಸ್ಟ್
ಮೆಟ್ರೋ ಕಾಮಗಾರಿಯ ಕಾರ್ಮಿಕನನ್ನು ಇರಿದು ಹತ್ಯೆ ಮಾಡಿದ ಪಾಪಿಗಳು!