ರಸ್ತೆಗಿಳಿದವರಿಗೆ ಲಾಠಿ ರುಚಿ ತೋರಿಸಿದ ಬೆಳ್ತಂಗಡಿ ಪೊಲೀಸರು!
07/05/2021
ದಕ್ಷಿಣ ಕನ್ನಡ: ಜಿಲ್ಲೆಯಲ್ಲಿ ಕಟ್ಟುನಿಟ್ಟಿನ ಕ್ರಮದ ಹಿನ್ನೆಲೆಯಲ್ಲಿ ರಸ್ತೆಯಲ್ಲಿ ವಿವಿಧ ಕಾರಣಗಳಿಗಾಗಿ ತಿರುಗಾಡುತ್ತಿದ್ದ ಸಾರ್ವಜನಿಕರಿಗೆ ಬೆಳ್ತಂಗಡಿ ಪೊಲೀಸರು ಲಾಠಿ ಬಿಸಿ ತೋರಿಸಿದ್ದಾರೆ.
ಬೆಳ್ತಂಗಡಿ ಪೊಲೀಸ್ ಠಾಣೆ ಉಪನಿರೀಕ್ಷಕ ನಂದಕುಮಾರ್ ಎಂ.ಎಂ. ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದ್ದು, ಅನಗತ್ಯವಾಗಿ ಸುತ್ತಾಟ ನಡೆಸಿದ ಜನರಿಗೆ ಪೊಲೀಸರು ಲಾಠಿ ಬಿಸಿ ತೋರಿಸಿದ್ದು, ಮಾಸ್ಕ್ ರಹಿತ , ಸೀಟ್ ಬೆಲ್ಟ್ ರಹಿತವಾಗಿ ಓಡಾಟ ನಡೆಸಿದವರಿಗೆ ದಂಡ ವಿಧಿಸಲಾಗಿದೆ.
ಅಗತ್ಯ ವಸ್ತುಗಳ ಖರೀದಿಗೆ ನಿಗದಿ ಪಡಿಸಲಾಗಿದ್ದ ಸಮಯ 9 ಗಂಟೆಗೆ ಮುಕ್ತಾಯವಾಗಿದ್ದು, ಆ ಬಳಿಕವೂ ರಸ್ತೆಯಲ್ಲಿ ಓಡಾಡುತ್ತಿರುವವರಿಗೆ ಪೊಲೀಸರು ಲಾಠಿ ಬಿಸಿ ತೋರಿಸಿದ್ದಾರೆ.
ಬೆಳ್ತಂಗಡಿಯಲ್ಲಿ ಮುಂಜಾನೆ ವೇಳೆಯಲ್ಲಿ ಚಿನ್ನಾಭರಣ ಮಳಿಗೆಯೊಂದು ಶಟರ್ ಮುಚ್ಚಿ ವ್ಯಾಪಾರ ನಡೆಸುತ್ತಿದ್ದು, ಈ ಮಳಿಗೆಯ ಮಾಲಿಕರ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ನಂದಕುಮಾರ್ ತಿಳಿಸಿದ್ದಾರೆ.