ರಸ್ತೆ ಮಧ್ಯೆ ಇದ್ದ ಹೊಂಡಕ್ಕೆ ಬಿದ್ದು ಡಿವೈಡರ್ ಮೇಲೆ ಚಲಿಸಿದ ಬಸ್! - Mahanayaka

ರಸ್ತೆ ಮಧ್ಯೆ ಇದ್ದ ಹೊಂಡಕ್ಕೆ ಬಿದ್ದು ಡಿವೈಡರ್ ಮೇಲೆ ಚಲಿಸಿದ ಬಸ್!

anand
16/07/2022

ಕುಂದಾಪುರ: ಶನಿವಾರ ರಸ್ತೆ ಮಧ್ಯೆ ಬಿದ್ದಿರುವ ಹೊಂಡದಲ್ಲಿ ಮಳೆ ನೀರು ತುಂಬಿದ್ದರಿಂದ ಮುಂಬೈನಿಂದ ಮಂಗಳೂರಿನತ್ತ ಸಾಗುತ್ತಿದ್ದ ಆನಂದ್ ಹೆಸರಿನ ಖಾಸಗಿ ಬಸ್ ಸುಮಾರು ಎರಡು ಅಡಿ ಹೊಂಡಕ್ಕೆ ಬಸ್ ಇಳಿದ ಪರಿಣಾಮ ಬಸ್ ಚಾಲಕನ ನಿಯಂತ್ರಣ ಕಳೆದುಕೊಂಡು 300 ಮೀಟರ್ ದೂರ ಡಿವೈಡರ್ ಮೇಲೆ ಚಲಿಸಿದ ಘಟನೆ ತಾಲೂಕಿನ ಕುಂಭಾಶಿ ಕೊರವಡಿ ಕ್ರಾಸ್ ಸಮೀಪದಲ್ಲಿ ನಡೆದಿದೆ.


Provided by

ಬಸ್ಸಿನಲ್ಲಿ 40ಕ್ಕೂ ಅಧಿಕ ಪ್ರಯಾಣಿಕರು ಇದ್ದರು ಎಂದು ತಿಳಿದುಬಂದಿದ್ದು, ಯಾವುದೇ ಅಪಾಯ ಸಂಭವಿಸಿಲ್ಲ. ರಾಷ್ಟ್ರೀಯ ಹೆದ್ದಾರಿ 66 ಕುಂದಾಪುರದಿಂದ ಉಡುಪಿಯ ಕೆಲ ರಸ್ತೆಗಳಲ್ಲಿ ಬಿದ್ದಿರುವ ಹೊಂಡದಲ್ಲಿ ಮಳೆ ನೀರು ಶೇಖರಣೆಯಾಗಿರುವುದರಿಂದ ವಾಹನ ಸವಾರರಿಗೆ ನಿತ್ಯ ಕಿರಿಕಿರಿ ಉಂಟಾಗುತ್ತಿದೆ.

ಹೊಂಡದಲ್ಲಿ‌ನೀರು ಶೇಖರಣೆಯಾಗಿರುವುದರಿಂದ ವಾಹನ ಸವಾರರಿಗೆ ಗೋಚರವಾಗದೆ ಇಂತಹ ಪದೇಪದೇ  ಅವಘಡಗಳಿಗೆ ಕಾರಣವಾಗಿದೆ ಎನ್ನಲಾಗಿದೆ.


Provided by

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ