ರಸ್ತೆಯಲ್ಲೇ ಮಗುಚಿ ಬಿದ್ದ ಮೀನು ತ್ಯಾಜ್ಯ ಸಾಗಾಟ ವಾಹನ!
ಚಾಲಕನ ನಿಯಂತ್ರಣ ತಪ್ಪಿ ಮೀನಿನ ತ್ಯಾಜ್ಯ ಸಾಗಾಟ ಮಾಡುತ್ತಿದ್ದ ಟೆಂಪೊವೊಂದು ರಸ್ತೆಯಲ್ಲಿ ಉರುಳಿಬಿದ್ದ ಘಟನೆ ಮಂಗಳೂರು ನಗರದ ಹೊರವಲಯದ ಕಲ್ಲಾಪು ಬಳಿ ನಡೆದಿದೆ.
ಮಂಗಳೂರು ದಕ್ಕೆಯಿಂದ ಮೀನು ತ್ಯಾಜ್ಯವನ್ನು ಹೇರಿಕೊಂಡು ಉಳ್ಳಾಲದತ್ತ ಸಂಚರಿಸುತ್ತಿದ್ದ ಟೆಂಪೊ ಕಲ್ಲಾಪುವಿನ ಗ್ಲೋಬಲ್ ಮಾರ್ಕೆಟ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಉರುಳಿಬಿದ್ದಿದೆ. ಈ ಟೆಂಪೊ ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾನೆ.
ಅಪಘಾತದಿಂದ ರಸ್ತೆಯಲ್ಲಿ ಮೀನು ತ್ಯಾಜ್ಯ ಚೆಲ್ಲಿದ್ದರಿಂದ ಕೆಲಹೊತ್ತು ವಾಹನಗಳ ಸುಗಮ ಸಂಚಾರಕ್ಕೆ ತೊಡಕುಂಟಾಗಿತ್ತು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw