ರಸ್ತೆಯಲ್ಲಿ ಮಹಿಳೆಯ ಕೈ ಹಿಡಿದೆಳೆದ ಜೆಡಿಎಸ್ ಮುಖಂಡ!
ಧಾರವಾಡ: ಜೆಡಿಎಸ್ ಮುಖಂಡ ರಸ್ತೆಯಲ್ಲಿ ಮಹಿಳೆಯೊಬ್ಬರ ಕೈ ಹಿಡಿದೆಳೆದ ಘಟನೆ ಧಾರವಾಡ ನಗರದ ಸತ್ತೂರ ಬಡಾವಣೆಯಲ್ಲಿ ನಡೆದಿದೆ ಎಂದು ವರದಿಯಾಗಿದ್ದು, ಈ ಸಂಬಂಧ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ ಎಂದು ತಿಳಿದು ಬಂದಿದೆ.
ಜೆಡಿಎಸ್ ಮುಖಂಡ ಶ್ರೀಕಾಂತ ಜಮನಾಳ ವಿರುದ್ಧ ಈ ಆರೋಪ ಕೇಳಿ ಬಂದಿದ್ದು, ಶ್ರೀಕಾಂತ ಜಮನಾಳ ಸತ್ತೂರಿನ ಮಹಿಳೆಯ ಮನೆಗೆ ತೆರಳಿದ್ದು, ಈ ವೇಳೆ ಮಹಿಳೆಯ ಕೈ ಹಿಡಿದು ಎಳೆದಾಡಿದ್ದಾರೆ ಎಂದು ಹೇಳಲಾಗಿದ್ದು, ಈ ಸಂಬಂಧ ವಿದ್ಯಾಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ವರದಿಗಳಿಂದ ತಿಳಿದು ಬಂದಿದೆ.
ಶ್ರೀಕಾಂತ ಜಮನಾಳ ವರ್ತನೆಗೆ ಕಾರಣ ಏನು ಎನ್ನುವುದು ಇನ್ನೂ ತಿಳಿದು ಬಂದಿಲ್ಲ. ಈ ಬಗ್ಗೆ ಮಾಹಿತಿ ನೀಡಲು ಮಹಿಳೆ ಕೂಡ ನಿರಾಕರಿಸಿದ್ದಾರೆನ್ನಲಾಗಿದೆ. ಸದ್ಯ ಮಹಿಳೆ ನೀಡಿರುವ ದೂರಿನನ್ವಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಶ್ರೀಕಾಂತ ಜಮನಾಳರನ್ನು ಹುಡುಕುತ್ತಿದ್ದಾರೆ. ಅವರ ಮೊಬೈಲ್ ಗೆ ಕರೆ ಮಾಡಿದರೆ, ಮೊಬೈಲ್ ಸ್ವಿಚ್ ಆಫ್ ಆಗಿರುವುದಾಗಿ ತಿಳಿದು ಬಂದಿದೆ ಎಂದು ಹೇಳಲಾಗಿದೆ.
ಇನ್ನಷ್ಟು ಸುದ್ದಿಗಳು…
ಜೈಲಿನಲ್ಲಿ ಮಹಿಳಾ ಪೊಲೀಸ್ ಮುಂದೆ ಬಟ್ಟೆ ಬಿಚ್ಚಿ ನಿಂತು ಕೈದಿಯಿಂದ ಅನುಚಿತ ವರ್ತನೆ!
ಮಂಗಳ ಗ್ರಹದಲ್ಲಿ ಜೀವಿಗಳಿದ್ದವು ಎನ್ನುವುದಕ್ಕೆ ಸಿಕ್ಕಿದೆ ಬಲವಾದ ಸಾಕ್ಷಿ!
ಉದನೆ ಗಣಪತಿ ಕಟ್ಟೆ ಧ್ವಂಸ: ಓರ್ವ ಆರೋಪಿಯನ್ನು ಬಂಧಿಸಿದ ಪೊಲೀಸರು
ಕಾಂಗ್ರೆಸ್ ಮುಂದಿನ ಎರಡು ದಶಕಗಳ ಕಾಲ ಅಧಿಕಾರಕ್ಕೆ ಬರುವ ಕನಸು ಕಾಣುವ ಅಗತ್ಯವಿಲ್ಲ | ನಳಿನ್ ಕುಮಾರ್ ಕಟೀಲ್
ಮಂಗಳೂರು: ಸಮುದ್ರದ ದಡದಲ್ಲಿ ಅಪರಿಚಿತ ಯುವತಿಯ ಮೃತದೇಹ ಪತ್ತೆ
ನೀರಲ್ಲಿ ಮುಳುಗಿದ ಮಕ್ಕಳು “ಅಪ್ಪಾ… ಕಾಪಾಡು” ಎಂದು ಕರೆದರೂ ಕಾಪಾಡಲಾಗಲಿಲ್ಲ | ನೊಂದ ತಂದೆಯಿಂದ ಆತ್ಮಹತ್ಯೆ