ಪುತ್ರನ ಮದುವೆಯ ಸಂಭ್ರಮದಲ್ಲಿದ್ದ ದಂಪತಿ ರಸ್ತೆ ಅಪಘಾತದಲ್ಲಿ ದಾರುಣ ಸಾವು!
ಬೀದರ್: ಪುತ್ರನ ಮದುವೆಯ ಸಂಭ್ರಮದಲ್ಲಿದ್ದ ದಂಪತಿ ರಸ್ತೆ ಅಪಘಾತಕ್ಕೆ ಬಲಿಯಾದ ದಾರುಣ ಘಟನೆ ಜಿಲ್ಲೆಯ ಭಾಲ್ಕಿ ತಾಲೂಕಿನ ಸೇವಾಲಾಲ್ ನಲ್ಲಿ ಬುಧವಾರ ತಡರಾತ್ರಿ ನಡೆದಿದ್ದು, ಮದುವೆಯ ಸಿದ್ಧತೆಯಲ್ಲಿದ್ದ ಕುಟುಂಬಸ್ಥರು ಇದೀಗ ಶೋಕ ಸಾಗರದಲ್ಲಿ ಮುಳುಗಿದ್ದಾರೆ.
ಭಾಲ್ಕಿಯ ಕಾಂಗ್ರೆಸ್ ಮುಖಂಡ, ಮಾಜಿ ಗ್ರಾ.ಪಂ. ಅಧ್ಯಕ್ಷ 50 ವರ್ಷ ವಯಸ್ಸಿನ ಸೂರ್ಯಕಾಂತ ಪಾಟೀಲ್ ಹಾಗೂ ಅವರ ಪತ್ನಿ 45 ವರ್ಷ ವಯಸ್ಸಿನ ಜಯಶ್ರೀ ಪಾಟೀಲ್ ಮೃತಪಟ್ಟ ದಂಪತಿಗಳಾಗಿದ್ದು, ಬೀದರ್ ನಗರಕ್ಕೆ ಹೋಗಿ ಸಂಬಂಧಿಕರಿಗೆ ಮದುವೆ ಆಮಂತ್ರಣ ಪತ್ರಿಕೆ ಕೊಟ್ಟು ಭಾಲ್ಕಿಗೆ ವಾಪಸ್ ಆಗುತ್ತಿರುವ ವೇಳೆ ಇವರು ಪ್ರಯಾಣಿಸುತ್ತಿದ್ದ ಕಾರು ಮಗುಚಿ ಬಿದ್ದ ಪರಿಣಾಮ ದಂಪತಿ ಸಾವನ್ನಪ್ಪಿದ್ದಾರೆ.
ಡಿಸೆಂಬರ್ 26ರಂದು ಪುತ್ರನ ಮದುವೆ ಕಾರ್ಯಕ್ರಮವಿದ್ದು, ಹೀಗಾಗಿ ದಂಪತಿ ಉತ್ಸಾಹದಿಂದ ತಮ್ಮ ಸಂಬಂಧಿಕರನ್ನು ಆಹ್ವಾನಿಸುತ್ತಿದ್ದರು. ಆದರೆ, ಈ ನಡುವೆ ನಡೆಯಬಾರದ ಘಟನೆ ನಡೆದು ಹೋಗಿದ್ದು, ಮದುವೆ ಸಂಭ್ರಮದಲ್ಲಿದ್ದ ಮನೆಯಲ್ಲೀಗ ಮೌನ ಆವರಿಸಿದೆ.
ಘಟನಾ ಸ್ಥಳಕ್ಕೆ ಶಾಸಕ ಈಶ್ವರ ಖಂಡ್ರೆ ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಧನ್ನೂರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ginhq56yzxz2MmHFl94DFN
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಶಾಲೆಗೆ ಹೋಗುತ್ತಿದ್ದ ಬಾಲಕಿಗೆ ಲೈಂಗಿಕ ಕಿರುಕುಳ: ಆರೋಪಿ ಅರೆಸ್ಟ್
ವೋಡಾಫೋನ್ – ಐಡಿಯಾ ವಿರುದ್ಧ ಕೇಸ್ ದಾಖಲಿಸಿದ ಜಿಯೋ!
ಕನ್ನಡ ಚಿತ್ರರಂಗದ ಹಿರಿಯ ನಟ ಶಿವರಾಮ್ ಆರೋಗ್ಯ ಸ್ಥಿತಿ ಚಿಂತಾಜನಕ
ಒಕ್ಕಲಿಗರ ಸಂಘದ ಚುನಾವಣೆ: ಆಮಿಷ ಒಡ್ಡಿ ಮತಬೇಡುವವರನ್ನು ಬೆಂಬಲಿಸಬೇಡಿ | ಯುವ ಮುಖಂಡ ಸಚಿನ್ ಸರಗೂರು
ವಿವಾದಕ್ಕೆ ಕಾರಣವಾದ ‘ಗರುಡ ಗಮನ ವೃಷಭ ವಾಹನ’ ಚಿತ್ರ | ಕೊಲೆ ಮಾಡಿ ಸಂಭ್ರಮಿಸುವ ದೃಶ್ಯಕ್ಕೆ ಮಾದಪ್ಪನ ಹಾಡು
‘ಫ್ಯಾಶಿಸ್ಟರಿಂದ ಕರ್ನಾಟಕ ರಕ್ಷಿಸೋಣ’ | ಡಿಸೆಂಬರ್ 3ರಂದು ಬೃಹತ್ ಜಾಗೃತಿ ಅಭಿಯಾನ