ರಸ್ತೆ ಬದಿ ನಿಂತಿದ್ದ ಮಹಿಳೆಗೆ ಮಾರಕಾಯುಧದಿಂದ ಹಲ್ಲೆ ನಡೆಸಿ ಚಿನ್ನಾಭರಣ ಕಳವು

ಕುಂದಾಪುರ: ರಸ್ತೆ ಬದಿ ನಿಂತಿದ್ದ ಮಹಿಳೆಯೊಬ್ಬರಿಗೆ ವ್ಯಕ್ತಿಯೊಬ್ಬ ಆಯುಧವೊಂದರಲ್ಲಿ ಹಲ್ಲೆ ನಡೆಸಿ ಚಿನ್ನಾಭರಣ ಕಳವು ಮಾಡಿರುವ ಘಟನೆ ಕೊರ್ಗಿ-ಹೆಸ್ಕುತ್ತೂರು ತಿರುವಿನ ಬಳಿ ಶುಕ್ರವಾರ ಸಂಜೆ ವೇಳೆ ನಡೆದಿದೆ.
ಕೊರ್ಗಿ ಗ್ರಾಪಂ ವ್ಯಾಪ್ತಿಯ ಕಾಡಿನಬೆಟ್ಟು ನಿವಾಸಿ ದೇವಕಿ(32) ಎಂಬವರು ತೆಕ್ಕಟ್ಟೆ- ದಬ್ಬೆಕಟ್ಟೆ ಮುಖ್ಯ ರಸ್ತೆಯ ಸಮೀಪದಲ್ಲಿ ಶಾಲಾ ವಾಹನದಲ್ಲಿ ಬರುವ ತನ್ನ ಮಗುವಿಗಾಗಿ ಕಾಯುತ್ತಿದ್ದರು. ಆಗ ಬಂದ ವ್ಯಕ್ತಿಯೊಬ್ಬ ಮಹಿಳೆಯ ತಲೆಗೆ ಮಾರಕಾಯುಧದಿಂದ ಮಾರಾಣಾಂತಿಕ ಹಲ್ಲೆ ನಡೆಸಿ ಚಿನ್ನಾಭರಣ ಕಳವು ಮಾಡಿ ಪರಾರಿಯಾಗಿರುವುದಾಗಿ ಎಂದು ದೂರಲಾಗಿದೆ.
ಇದರಿಂದ ಗಂಭೀರವಾಗಿ ಗಾಯಗೊಂಡ ದೇವಕಿ ಅವರನ್ನು ಮೊದಲು ಕೋಟೇಶ್ವರ ಖಾಸಗಿ ಆಸ್ಪತ್ರೆಗೆ ಕರೆದೊಯ್ದು, ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಸ್ಥಳಕ್ಕೆ ಆಗಮಿಸಿರುವ ಕುಂದಾಪುರ ಗ್ರಾಮಾಂತರ ಪೊಲೀಸರು ಪರಿಶೀಲನೆ ನಡೆಸಿ ತನಿಖೆ ನಡೆಸುತ್ತಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka