ರಸ್ತೆ ದಾಟಲು ನಿಂತಿದ್ದ ಮಹಿಳೆಗೆ ಬೈಕ್ ಡಿಕ್ಕಿಯಾಗಿ ಪರಾರಿಯಾದ ಬೈಕ್: ಮಹಿಳೆ ಸಾವು
ಬಂಟ್ವಾಳ: ರಸ್ತೆದಾಟಲು ನಿಂತಿದ್ದ ಮಹಿಳೆಗೆ ಬೈಕೊಂದು ಡಿಕ್ಕಿಯಾಗಿ ಪರಾರಿಯಾದ ಘಟನೆ ನಡೆದಿದ್ದು, ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಬಿ.ಸಿ.ರೋಡ್ ನಲ್ಲಿ ಮಂಗಳವಾರ ಸಂಜೆ ಈ ಘಟನೆ ನಡೆದಿದೆ. ಇಲ್ಲಿನ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಮುಂಭಾಗದಲ್ಲಿ ಮಹಿಳೆ ರಸ್ತೆ ದಾಟಲೆಂದು ನಿಂತಿದ್ದರು ಎನ್ನಲಾಗಿದೆ.
ಈ ವೇಳೆ ಮಂಗಳೂರು ಕಡೆಯಿಂದ ವೇಗವಾಗಿ ಬಂದ ಅಪರಿಚಿತ ಬೈಕೊಂದು ಮಹಿಳೆಗೆ ಡಿಕ್ಕಿ ಹೊಡೆದಿದ್ದು, ಪರಿಣಾಮವಾಗಿ ರಸ್ತೆಗೆಸೆಯಲ್ಪಟ್ಟ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಇನ್ನೂ ಅಪಘಾತಕ್ಕೆ ಕಾರಣವಾ ಬೈಕ್ ಸವಾರನ ಪತ್ತೆಗೆ ಪೊಲೀಸರು ಶೋಧ ಮುಂದುವರೆಸಿದ್ದು, ಮೆಲ್ಕಾರ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Bk3PAoJFRvJLUSBPd39m1C
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಉದ್ಯೋಗದ ಆಮಿಷ: ಹೆಣ್ಣು ಮಕ್ಕಳನ್ನು ವೇಶ್ಯಾವಾಟಿಕೆ ದಂಧೆಗೆ ತಳ್ಳಿದ ಮೂವರ ಬಂಧನ
ಒಂದೇ ಕುಟುಂಬದ ಐವರ ಹತ್ಯೆ ಪ್ರಕರಣ: ಹಂತಕಿಯ ಬಂಧನ
ಸಮವಸ್ತ್ರ ವಿವಾದ: ಶಾಸಕರ ಎದುರೇ ಹೊಡೆದಾಡಿಕೊಂಡ ವಿದ್ಯಾರ್ಥಿಗಳು!
ಸಮವಸ್ತ್ರ ವಿವಾದ: ಮುಂದಿನ 3 ದಿನಗಳ ಕಾಲ ಪ್ರೌಢ ಶಾಲಾ ಕಾಲೇಜುಗಳಿಗೆ ರಜೆ
ಪ್ರತಿಭಟನೆಯ ಬಳಿಕ ಕೇಸರಿ ಪೇಟ ರಾಶಿ ಹಾಕುತ್ತಿರುವ ದೃಶ್ಯ ವೈರಲ್!