ಹೃದಯಾಘಾತದ ಪ್ರಮಾಣ ಕಳೆದ 10 ವರ್ಷದಲ್ಲಿ 22% ರಷ್ಟು ಹೆಚ್ಚು: ಡಾ.ಸಿ.ಎನ್ ಮಂಜುನಾಥ್ - Mahanayaka
6:17 PM Saturday 21 - September 2024

ಹೃದಯಾಘಾತದ ಪ್ರಮಾಣ ಕಳೆದ 10 ವರ್ಷದಲ್ಲಿ 22% ರಷ್ಟು ಹೆಚ್ಚು: ಡಾ.ಸಿ.ಎನ್ ಮಂಜುನಾಥ್

heart attack
07/08/2023

ಬೆಂಗಳೂರು: ಹೃದಯಾಘಾತದ ಪ್ರಮಾಣ ಕಳೆದ 10 ವರ್ಷದಲ್ಲಿ 22% ರಷ್ಟು ಹೆಚ್ಚಾಗಿದೆ ಎಂದು ಜಯದೇವ ಆಸ್ಪತ್ರೆಯ ನಿರ್ದೇಶಕ ಡಾ.ಸಿ.ಎನ್ ಮಂಜುನಾಥ್ ಹೇಳಿದ್ದಾರೆ.

ಚಿತ್ರನಟ ವಿಜಯರಾಘವೇಂದ್ರ ಪತ್ನಿ ಸ್ಪಂದನಾ ಹೃದಾಯಾಘಾತದಿಂದ ಸಾವಿನ ವಿಚಾರವಾಗಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯುವ ಜನರಿಗೆ ತೂಕ ಕಡಿಮೆ ಮಾಡುವ ಉತ್ಸಾಹ ಬೇಡ. ಅತೀ ವ್ಯಾಯಾಮದಿಂದ ರಕ್ತನಾಳಗಳಿಗೆ ಸಮಸ್ಯೆ ಉಂಟಾಗುತ್ತದೆ. ಕೆಲವರಿಗೆ ಹೃದಯಾಘಾತದಸುಳಿವು ಸಿಗುತ್ತದೆ. ಇನ್ನೂ ಕೆಲವರಿಗೆ ಸುಳಿವು ಸಿಗುವುದಿಲ್ಲ .

ಯುವಕರಲ್ಲಿ ಹಾಗೂ ಮಧ್ಯ ವಯಸ್ಕರಲ್ಲಿ ಹೃದಯಾಘಾತದ ಪ್ರಮಾಣ ಕಳೆದ 10 ವರ್ಷದಲ್ಲಿ 22% ಹೆಚ್ಚಾಗಿದೆ. ಕೆಲವರು ನಾರ್ಕೋಟಿಕ್ ಡ್ರಗ್ಸ್, ಹುಕ್ಕಾ ಬಾರ್, ಗಾಂಜಾ ಸೇವಿಸುತ್ತಿದ್ದಾರೆ. ಕಳೆದ 6 ವರ್ಷಗಳಲ್ಲಿ 5500ಕ್ಕೂ ಹೆಚ್ಚು ಯುವಕರಿಗೆ ಜಯದೇವ ಆಸ್ಪತ್ರೆಯಲ್ಲಿ ಹೃದಯ ಸಂಬಂಧಿ ಚಿಕಿತ್ಸೆ ಕೊಟ್ಟಿದ್ದೇವೆ ಎಂದು ತಿಳಿಸಿದರು
ಅನುವಂಶಿಯತೆಯಿಂದ 17% ಹೃದಯಾಘಾತವಾಗುತ್ತಿದೆ.


Provided by

ಫ್ಯಾಟ್ ಲಿವರ್, ಮಹಿಳೆಯರಲ್ಲಿ ಪಿಒಸಿಡಿ, ಅತೀಯಾದ ಗೋರಕೆ ಹಾಗೂ ವಾಯುಮಾಲಿನ್ಯ ಸಹ ಹೃದಯಾಘಾತಕ್ಕೆ ಹೊಸ ಕಾರಣಗಳಾಗಿವೆ. ಈಗ ಒತ್ತಡವೇ ಸಿಗರೇಟ್ ರೀತಿ ಕೆಲಸ ಮಾಡುತ್ತಿದೆ. ಇದರಿಂದ ಹೆಚ್ಚಿನ ಹೃದಯಾಘಾತಗಳು ಸಂಭವಿಸುತ್ತಿವೆ. ಲೋ ಬಿಪಿ ಇರುವಂತವರು ಹೆಚ್ಚು ನೀರನ್ನು ಕುಡಿಯಬೇಕು. ಹೆಚ್ಚು ಹಣ್ಣುಗಳನ್ನು ಸೇವಿಸಬೇಕು.

ಹೆಚ್ಚಿನ ಶ್ರಮದಾಯಕ ವ್ಯಾಯಾಮ ಮಾಡುವುದು ಹಾಗೂ ಎನರ್ಜಿ ಡ್ರಿಂಕ್ಸ್ ಬಳಕೆ ಹೃದಯಾಘಾತಕ್ಕೆ ಕಾರಣವಾಗುತ್ತಿದೆ. ಈ ಬಗೆಯ ಶ್ರಮದಾಯಕ ವ್ಯಾಯಾಮ ಮಾಡುವವರು ಹೃದಯದ ಪರೀಕ್ಷೆ ಮಾಡಿಸಿಕೊಳ್ಳಬೇಕು. ಕೆಲವರಿಗೆ ಆರೋಗ್ಯದ ಸಮಸ್ಯೆ ಇಲ್ಲದೆಯೂ ಹೃದಯಾಘಾತಗಳು ಆಗುತ್ತಿವೆ. ಅಲ್ಲದೇ ಅಂತವರಿಗೆ ಯಾವುದೇ ದುಶ್ಚಟಗಳು ಇಲ್ಲದೇ ಹೃದಯಾಘಾತಗಳಾಗಿವೆ. ಹೀಗಾಗಿ 35 ವರ್ಷ ಹೆಚ್ಚಾದ ಮೇಲೆ ವಾರ್ಷಿಕವಾಗಿ ಒಮ್ಮೆ ಆರೋಗ್ಯ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 74835 51849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/D73015iu7jn2glm2MECosd

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ