ಮುಖ್ಯಮಂತ್ರಿ ಬದಲಾವಣೆ: ರಾತ್ರೋ ರಾತ್ರಿ ಬಸವರಾಜ್ ಬೊಮ್ಮಾಯಿ, ಪ್ರಹ್ಲಾದ್ ಜೋಶಿ ನಡುವೆ ರಹಸ್ಯ ಚರ್ಚೆ! - Mahanayaka
8:04 PM Wednesday 11 - December 2024

ಮುಖ್ಯಮಂತ್ರಿ ಬದಲಾವಣೆ: ರಾತ್ರೋ ರಾತ್ರಿ ಬಸವರಾಜ್ ಬೊಮ್ಮಾಯಿ, ಪ್ರಹ್ಲಾದ್ ಜೋಶಿ ನಡುವೆ ರಹಸ್ಯ ಚರ್ಚೆ!

joshi bommai
25/07/2021

ಧಾರವಾಡ: ಸಿಎಂ ಯಡಿಯೂರಪ್ಪ ಅವರ ನೇತೃತ್ವದ ಸರ್ಕಾರ ಎರಡು ವರ್ಷ ಪೂರೈಸಿದ ಸಂದರ್ಭದಲ್ಲಿಯೇ ನಾಯಕತ್ವ ಬದಲಾವಣೆ ವಿಚಾರ ಚರ್ಚೆಯಲ್ಲಿದ್ದು, ಇಂದು ಅಂತಿಮ ಸುದ್ದಿ ದೊರೆಯುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಈ ನಡುವೆ ನಿನ್ನೆ ರಾತ್ರಿಯಿಂದಲೇ ಸಿಎಂ ಬದಲಾವಣೆ ವಿಚಾರವಾಗಿ ರಾಜಕೀಯ ಚಟುವಟಿಕೆಗಳು ನಡೆಯುತ್ತಿವೆ ಎಂದು ಹೇಳಲಾಗಿದೆ.

ಶನಿವಾರ ರಾತ್ರಿ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರು ಹುಬ್ಬಳ್ಳಿಯ ನಿವಾಸದಲ್ಲಿ ಪ್ರಹ್ಲಾದ್ ಜೋಶಿ ಅವರನ್ನು ಭೇಟಿಯಾದರು.  ಇಬ್ಬರು ಕೂಡ ಪ್ರತ್ಯೇಕವಾಗಿ ಮಾತುಕತೆ ನಡೆಸಿದ್ದು, ಸಿಎಂ ಬದಲಾವಣೆ ಸಮಯದಲ್ಲಿ ಈ ಭೇಟಿ ಕುತೂಹಲವನ್ನು ಸೃಷ್ಟಿಸಿದೆ.

ಮುಖ್ಯಮಂತ್ರಿ ಬದಲಾವಣೆಯಾದರೆ, ಈ ಸ್ಥಾನಕ್ಕೆ ಪ್ರಹ್ಲಾದ್ ಜೋಶಿ ಅಥವಾ ಬಸವರಾಜ್ ಬೊಮ್ಮಾಯಿ ಅವರು ಆಯ್ಕೆಯಾಗಲಿದ್ದಾರೆ ಎನ್ನುವ ಮಾತುಗಳು ಈ ಹಿಂದಿನಿಂದಲೂ ಕೇಳಿ ಬರುತ್ತಿತ್ತು. ಇದೀಗ ಮುಖ್ಯಮಂತ್ರಿ ಬದಲಾವಣೆಯ ಅಂತಿಮ ಘಟ್ಟದಲ್ಲಿ ಇವರಿಬ್ಬರು ಭೇಟಿಯಾಗಿ ಚರ್ಚಿಸಿರುವುದು ಕುತೂಹಲವನ್ನು ಸೃಷ್ಟಿಸಿದೆ.

ಇನ್ನೂ ಪ್ರಹ್ಲಾದ್ ಜೋಶಿ ಅವರೊಂದಿಗಿನ ಭೇಟಿಯ ಬಳಿಕ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದ ಬೊಮ್ಮಾಯಿ, ಇದೊಂದು ಸೌಹಾರ್ದಯುತ ಭೇಟಿಯಾಗಿತ್ತು. ಮಳೆಯ ಬಳಿಕ ನನ್ನ ಶಿಗ್ಗಾವಿ ಕ್ಷೇತ್ರದಲ್ಲಿನ ಪ್ರವಾಹ ಪರಿಸ್ಥಿತಿ ರಕ್ಷಣಾ ಕಾರ್ಯಾಚರಣೆ ಬಗ್ಗೆ ಚರ್ಚಿಸಲಾಗಿದೆ. ಯಾವುದೇ ರಾಜಕೀಯದ ವಿಚಾರ ಚರ್ಚಿಸಿಲ್ಲ ಎಂದು ಅವರು ತಿಳಿಸಿದರು.

ಭಾನುವಾರ ಮತ್ತು ಸೋಮವಾರ ಕರ್ನಾಟಕದಲ್ಲಿ ಹಲವು ರಾಜಕೀಯ ಬೆಳವಣಿಗೆಗಳು ನಡೆಯಲಿದೆ. ಮುಂದಿನ ಮುಖ್ಯಮಂತ್ರಿ ಯಾರಾಗುತ್ತಾರೆ ಎನ್ನುವ ವಿಚಾರ ಈಗಾಗಲೇ ಬಿಜೆಪಿಯ ಪ್ರಮುಖ ನಾಯಕರಿಗೆ ತಿಳಿಸಿರುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

ಇನ್ನಷ್ಟು ಸುದ್ದಿಗಳು…

ಆಟವಾಡುವ ನೆಪದಲ್ಲಿ ಬಾಲಕಿಯನ್ನು ಕರೆದೊಯ್ದು ಅತ್ಯಾಚಾರ!

ನನ್ನ ಗಂಡ ಅಮಾಯಕ, ಅವರು ಮಾಡಿದ್ದು ಸೆಕ್ಸ್ ವಿಡಿಯೋ ಅಲ್ಲ ಕಾಮ ಪ್ರಚೋದಕ ವಿಡಿಯೋ | ಶಿಲ್ಪಾ ಶೆಟ್ಟಿ

ಯುವಕನ ಲಾಕಪ್ ಡೆತ್ ವಿರೋಧಿಸಿ ಪೊಲೀಸ್ ಠಾಣೆಗೆ ನುಗ್ಗಿದ ಗ್ರಾಮಸ್ಥರು | ಮಹಿಳಾ ಪೇದೆ ಸ್ಥಳದಲ್ಲಿಯೇ ಸಾವು

ಸಚಿವೆ ಶಶಿಕಲಾ ಜೊಲ್ಲೆ ಮನೆಗೆ ಮೊಟ್ಟೆ ಎಸೆದ NSUI ಕಾರ್ಯಕರ್ತರು

ತಾಯಿಯ ಕಣ್ಣೆದುರೇ ಬಾಲಕಿ ನೀರಿನಲ್ಲಿ ಕೊಚ್ಚಿ ಹೋದಳು!

ಇತ್ತೀಚಿನ ಸುದ್ದಿ