ರೇವ್ ಪಾರ್ಟಿ: ತೆಲುಗು ನಟಿ ಹೇಮಾ ಸೇರಿದಂತೆ 8 ಮಂದಿಗೆ ಸಿಸಿಬಿ 2ನೇ ನೋಟಿಸ್

ಬೆಂಗಳೂರು : ಬೆಂಗಳೂರಿನ ಜಿ.ಆರ್. ಪಾರ್ಮ್ ಹೌಸ್ ನಲ್ಲಿ ನಡೆದಿದೆ ಎನ್ನಲಾಗಿರುವ ರೇವ್ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲುಗು ನಟಿ ಹೇಮಾ ಸೇರಿ 8 ಮಂದಿಗೆ ಸಿಸಿಬಿ ಪೊಲೀಸರು 2 ನೇ ನೋಟಿಸ್ ನೀಡಿದ್ದಾರೆ.
ಸಿಸಿಬಿ ತನಿಖಾಧಿಕಾರಿ ಎದುರು ವಿಚಾರಣೆಗೆ ಹಾಜರಾಗುವಂತೆ ತೆಲುಗು ನಟಿ ಹೇಮಾ ಸೇರಿ 8 ಮಂದಿಗೆ ಮತ್ತೆ ಸಿಸಿಬಿ ಪೊಲೀಸರು ನೋಟಿಸ್ ನೀಡಿದ್ದಾರೆ. ಮೊದಲ ನೋಟಿಸ್ ಸಂಬಂಧ ವಿಚಾರಣೆಗೆ ಹಾಜರಾಗದ ಹಿನ್ನೆಲೆ ಸಿಸಿಬಿ ಪೊಲೀಸರು 2 ನೇ ನೋಟಿಸ್ ನೀಡಿದ್ದು, ಜೂನ್ 1 ರಂದು ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ.
ವಾಸು ಎಂಬುವವರ ಹುಟ್ಟುಹಬ್ಬ ಹಿನ್ನೆಲೆಯಲ್ಲಿ ಎಲೆಕ್ಟ್ರಾನಿಕ್ ಸಿಟಿ ಬಳಿಯ ಜಿ.ಆರ್.ಪಾರ್ಮ್ ಹೌಸ್ ನಲ್ಲಿ ರೇವ್ ಪಾರ್ಟಿ ಆಯೋಜಿಸಲಾಗಿತ್ತು ಎನ್ನುವ ಆರೋಪ ಕೇಳಿ ಬಂದಿದೆ.

Provided by

Provided by

Provided by

Provided by

Provided by

Provided by

Provided by

Provided by

Provided by

Provided by

Provided by

Provided by

Provided by

Provided by

Provided by

Provided by

Provided by

Provided by

Provided by

Provided by <

Provided by

Provided by

Provided by

Provided by
ರೇವ್ ಪಾರ್ಟಿ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದ ವೇಳೆ 103 ಜನರು ಸಿಕ್ಕಿಬಿದ್ದಿದ್ದರು. ಟಾಲಿವುಡ್ ಖ್ಯಾತ ನಟಿ ಹೇಮಾ, ಆಶು ರೈ ಸೇರಿದಂತೆ ಹಲವರನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸಿದ್ದರು.
ರೇವ್ ಪಾರ್ಟಿ ಪ್ರಕರಣದಲ್ಲಿ ಐವರನ್ನು ಬಂಧಿಸಲಾಗಿತ್ತು.ರೇವ್ ಪಾರ್ಟಿಯಲ್ಲಿ ಭಾಗಿಯಾಗಿದ್ದ 103 ಜನರ ರಕ್ತದ ಮಾದರಿಯನ್ನು ಪರೀಕ್ಷಿಸಲಾಗಿದ್ದು, ಅವರಲ್ಲಿ 86 ಜನರು ಡ್ರಗ್ಸ್ ಸೇವಿಸಿರುವುದು ದೃಢವಾಗಿದೆ ಎನ್ನಲಾಗಿದೆ.
ನಟಿ ಹೇಮಾ, ಆಶು ರೈ ಸೇರಿದಂತೆ 86 ಜನರ ರಕ್ತದ ಮಾದರಿ ವರದಿ ಬಂದಿದ್ದು, 86 ಜನರು ಡ್ರಗ್ಸ್ ಸೇವಿಸಿರುವುದು ಪತ್ತೆಯಾಗಿದೆ ಎಂದು ತಿಳಿದು ಬಂದಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/JItjEWZ9e5fBWDL6CkTr97
ಫೇಸ್ ಬುಕ್ ಪೇಜ್ ಫಾಲೋ ಮಾಡಿ: https://www.facebook.com/profile.php?id=61556202767068