ರೇವ್ ಪಾರ್ಟಿ ಮೇಲೆ ಪೊಲೀಸ್ ದಾಳಿ: 4 ನಟಿಯರು, ಬಿಗ್ ಬಾಸ್ ಸ್ಪರ್ಧಿ ಅರೆಸ್ಟ್

ನಾಸಿಕ್: ರೇವ್ ಪಾರ್ಟಿ ನಡೆಯುತ್ತಿದ್ದ ಎರಡು ವಿಲ್ಲಾಗಳ ಮೇಲೆ ಮಹಾರಾಷ್ಟ್ರ ಪೊಲೀಸರು ದಾಳಿ ನಡೆಸಿ, 12 ಯುವತಿಯರು ಹಾಗೂ 22 ಯುವಕರನ್ನು ಬಂಧಿಸಿದ್ದಾರೆ. ಬಂಧಿತ ಯುವಕರ ಪೈಕಿ ನಾಲ್ವರು ನಟಿಯರು ಹಾಗೂ ಓರ್ವಳು ಬಿಗ್ ಬಾಸ್ ರಿಯಾಲಿಟಿ ಶೋನಲ್ಲಿ ಭಾಗವಹಿಸಿದ್ದ ಮಾಜಿ ಸ್ಪರ್ಧಿ ಎಂದು ತಿಳಿದು ಬಂದಿದೆ.
ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಇಗತ್ಪುರಿ ಪಟ್ಟಣದ ಹೊರವಲಯದಲ್ಲಿರುವ ಎರಡು ಖಾಸಗಿ ವಿಲ್ಲಾಗಳಲ್ಲಿ ರೇವ್ ಪಾರ್ಟಿ ನಡೆಯುತ್ತಿದ್ದ ಖಚಿತ ಮಾಹಿತಿಯ ಮೆರೆಗೆ ಪೊಲೀಸರು ದಾಳಿ ನಡೆಸಿದ್ದರು.
ರೇವ್ ಪಾರ್ಟಿ ಸ್ಥಳದಲ್ಲಿ ಅಪಾರ ಪ್ರಮಾಣದ ಡ್ರಗ್ಸ್ ಹಾಗೂ ಹುಕ್ಕಾಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ನಾಸಿಕ್ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ಸಚಿನ್ ಪಾಟೀಲ್ ತಿಳಿಸಿದ್ದಾರೆ.
ರೇವ್ ಪಾರ್ಟಿಯಲ್ಲಿ ಭಾಗವಹಿಸಿದ್ದವರನ್ನು ವೈದ್ಯಕೀಯ ಪರೀಕ್ಷೆಗೊಳಪಡಿಸಲಾಗಿದ್ದು, ಈ ವೇಳೆ 10 ಪುರುಷರು ಹಾಗೂ 12 ಮಹಿಳೆಯರು ಡ್ರಗ್ಸ್ ಸೇವನೆ ಮಾಡಿರುವುದು ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇನ್ನೂ ಬಂಧಿತ ನಟಿಯರು ಹಾಗೂ ಬಿಗ್ ಬಾಸ್ ಸ್ಪರ್ಧಿಯ ಹೆಸರನ್ನು ಪೊಲೀಸರು ಬಹಿರಂಗಗೊಳಿಸಿಲ್ಲ. ಸದ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.