ಸಿ.ಟಿ.ರವಿ ಕೇಸ್ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ವರ್ಗಾವಣೆ
ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅಶ್ಲೀಲ ಪದ ಬಳಸಿದ ಪ್ರಕರಣಕ್ಕೆ ಬಿಜೆಪಿ ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಅವರ ಪ್ರಕರಣವನ್ನು ಬೆಳಗಾವಿ ಜೆಎಂಎಫ್ ಸಿ ನ್ಯಾಯಾಲಯ ಬೆಂಗಳೂರಿನ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ವರ್ಗಾವಣೆ ಮಾಡಿದೆ.
ಈ ಪ್ರಕರಣವು ನಮ್ಮ ವ್ಯಾಪ್ತಿಗೆ ಬರುವುದಿಲ್ಲ ಎಂದು ಆದೇಶ ನೀಡಿರುವ ಐದನೇ ಸಿವಿಲ್ ಮತ್ತು ಜೆಎಂಎಫ್ ಸಿ ನ್ಯಾಯಾಲಯದ ನ್ಯಾಯಾಧೀಶೆ ಸ್ಪರ್ಶ ಎಂ.ಡಿಸೋಜ ಅವರು ಬೆಂಗಳೂರು ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ವರ್ಗಾವಣೆಗೊಳಿಸಿದರು.
ಇದರ ಬೆನ್ನಲ್ಲೇ ಸಿ.ಟಿ.ರವಿಯವರನ್ನು ಪೊಲೀಸರು ಬೆಳಗಾವಿಯಿಂದ ಬೆಂಗಳೂರಿಗೆ ಕರೆತರುತ್ತಿದ್ದಾರೆ. ನಿಮಗೆ ಸಂಬಂಧಿಸಿದ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿ ಎಂದು ನ್ಯಾಯಾಧೀಶರು ಸಿ.ಟಿ.ರವಿ ಪರ ವಕೀಲರಿಗೆ ಸೂಚನೆ ನೀಡಿದರು.
ಇತ್ತ ಬೆಂಗಳೂರಿನ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಸಿ.ಟಿ.ರವಿ ಪರ ವಕೀಲ ಶ್ರೀನಿವಾಸರಾವ್ ಅವರು ನ್ಯಾಯಾಲಯಕ್ಕೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದಾರೆ
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: